3
Mangaluru: ಮೊನ್ನೆ ತಾನೇ ಕಡಬದಲ್ಲಿ ಯುವಕನೋರ್ವ ರೈಲಿನಿಂದ ಇಪ್ಪತ್ತೈದು ಅಡಿ ಆಳ ಬಿದ್ದಿದ್ದ. ಈ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ.
ಮಂಗಳೂರಿನಿಂದ (Mangaluru) ಬೆಂಗಳೂರಿಗೆ ಹೋಗುತ್ತಿದ್ದ ರೈಲಿನಿಂದ ಪ್ರಯಾಣಿಕರೊಬ್ಬರು ನರಿಮೊಗರು ಎಂಬಲ್ಲಿ ಕೆಳಗೆ ಬಿದ್ದಿದ್ದಾರೆ. ಬೆಳಿಗ್ಗೆ ಕರ್ತವ್ಯಕ್ಕೆ ಹಾಜರಾದ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯನ್ನು ಬಚಾವ್ ಮಾಡಿದ್ದಾರೆ.
ಬಿದ್ದು ಗಾಯಗೊಂಡ ವ್ಯಕ್ತಿಯನ್ನು ಸಕಲೇಶಪುರದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ಜನರಲ್ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದಾಗ ಆಕಸ್ಮಾತ್ ಆಗಿ ಕೆಳಗೆ ಬಿದ್ದಿದ್ದಾರೆ. ಗಂಭೀರ ಗಾಯಗೊಂಡ ಇವರು ಈಗ ಚಿಕಿತ್ಸೆ ಪಡೆಯುತ್ತಿದ್ದಾರೆ.
