5
ಮಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಆಲಿಗೆ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರ ಆರ್ಥಿಕ ಅಪರಾಧ ವಿಭಾಗದಿಂದ ನೋಟಿಸ್ ನೀಡಲಾಗಿದೆ. ಮಂಗಳೂರಿನ ಮನೆಗೆ ಬಂದು ದೆಹಲಿ ಪೊಲೀಸರು ಒಂದು ವಾರದಲ್ಲಿ ಹಾಜರಾಗುವಂತೆ ನೋಟಿಸ್ ನೀಡಿ ತೆರಳಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಪ್ರಕರಣದಲ್ಲಿ ಇಡಿ ನೀಡಿರುವ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಆರ್ಥಿಕ ಅಪರಾಧ ವಿಭಾಗ ಎಫ್‌ಐಆರ್ ದಾಖಲು ಮಾಡಿತ್ತು. ಅ.3 ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಮೇಲೆ ಪ್ರಕರಣ ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ಗೂ ನೋಟಿಸ್ ಜಾರಿಯಾಗಿತ್ತು. ಇದೀಗ ಡಿಕೆಶಿ ಆಪ್ತ ಇನಾಯತ್ ಅಲಿಗೂ ನೋಟಿಸ್ ನೀಡಲಾಗಿದ್ದು, ತನಿಖೆಗೆ ಹಾಜರಾಗಲು ಹೇಳಲಾಗಿದೆ.
