ಬೆಂಗಳೂರು: ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಹಲವು ದಿನಗಳಿಂದ ಏರುಪೇರಾಗುತ್ತಿದ್ದು, ನಗರ ವಾಸಿಗಳಲ್ಲಿ ಇದು ಆತಂಕ ಸೃಷ್ಟಿ ಉಂಟು ಮಾಡಿದೆ. ಮಂಗಳೂರಿನಲ್ಲಿ ಕೂಡಾ ಇಂದು ವಾಯು ಗುಣಮಟ್ಟ ಕಳಪೆಯಾಗಿದ್ದು, ಉಸಿರಾಟ ಸಮಸ್ಯೆ ಇರುವವರಿಗೆ ಇದು ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಬೆಂಗಳೂರಿನ ಗಾಳಿಯ ಗುಣಮಟ್ಟ 169 ಇದ್ದು, ಮಂಗಳೂರಿನಲ್ಲಿ ಗಾಳಿಯ ಗುಣಮಟ್ಟ 185 ಕ್ಕೆ ತಲುಪಿದ್ದು, ತೀರಾ ಕಳಪೆ ಮಟ್ಟಕ್ಕೆ ಕುಸಿದಿದೆ. ಅಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅತಿಯಾಗಿ ವಾಹನಗಳ ಬಳಕೆ, ನಿರ್ಮಾಣ ಕಾರ್ಯದಲ್ಲಿ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಗಾಳಿಯ ಗುಣಮಟ್ಟದ ಮೇಲೆ ಪ್ರಮುಖ ಪರಿಣಾಮ ಬೀರುತ್ತದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
ಬೆಂಗಳೂರು –169
ಮಂಗಳೂರು-185
ಮೈಸೂರು – 104
ಬೆಳಗಾವಿ – 80
ಕಲಬುರ್ಗಿ-84
ಶಿವಮೊಗ್ಗ – 64
ಬಳ್ಳಾರಿ – 168
ಹುಬ್ಬಳ್ಳಿ- 86
ಉಡುಪಿ –171
ವಿಜಯಪುರ –68
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
ಉತ್ತಮ- 0-50
ಮಧ್ಯಮ – 50-100
ಕಳಪೆ – 100-150
ಅನಾರೋಗ್ಯಕರ – 150-200
ಗಂಭೀರ – 200 – 300
ಅಪಾಯಕಾರಿ – 300 -500+

