Home » ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

ಇಂದು ಮಂಗಳೂರು ದಸರಾ ಮಹೋತ್ಸವಕ್ಕೆ ಅದ್ದೂರಿ ಚಾಲನೆ

by Praveen Chennavara
0 comments

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವವನ್ನು ಅ. 10ರ ಸಂಜೆ 6ಕ್ಕೆ ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ ಉದ್ಘಾಟಿಸಲಿದ್ದಾರೆ.

ದಸರಾ ಮಹೋತ್ಸವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅ. 7ರಂದು ಚಾಲನೆ ನೀಡಲಾಗಿತ್ತು.

ಮೂರು ದಿನಗಳಲ್ಲಿ ಸಾವಿರಾರು ಮಂದಿ ದಸರಾ ಮಹೋತ್ಸವನ್ನು ವೀಕ್ಷಣೆ ಮಾಡಿದ್ದು, ಪ್ರತಿನಿತ್ಯ 5 ಸಾವಿರಕ್ಕೂ ಅಧಿಕ ಮಂದಿಗೆ ಅನ್ನಪ್ರಸಾದ ಸ್ವೀಕರಿಸಿದ್ದಾರೆ.

ನವರಾತ್ರಿ ಮಹೋತ್ಸವದ ಸಂಭ್ರಮ
ನವರಾತ್ರಿ ಮಹೋತ್ಸವದ ಪ್ರಯುಕ್ತ ಮಂಗಳೂರು ನಗರ ಮತ್ತು ಗ್ರಾಮಾಂತರ ದೇವಸ್ಥಾನಗಳು ವಿದ್ಯುತ್‌ ದೀಪಾಲಂಕಾರಗಳಿಂದ ಕಂಗೊಳಿಸುತ್ತಿವೆ.

You may also like

Leave a Comment