Holiday : ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಸಿಹಿ ಸಿದ್ದಿ ಸಿಕ್ಕಿದ್ದು ಮಾರ್ಚ್ 14ರಂದು ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಹೌದು, ಪ್ರತಿ ವರ್ಷ ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತದೆ. ಈ ವರ್ಷ ಮಾರ್ಚ್ 14ರ ಶುಕ್ರವಾರ, ಫಾಲ್ಗುಣ ಮಾಸದ ಹುಣ್ಣಿಮೆಯಂದು ಹೋಳಿ ಹಬ್ಬವನ್ನು ದೇಶಾದ್ಯಂತ ಆಚರಣೆ ಮಾಡಲಾಗುತ್ತದೆ. ಈ ಬಣ್ಣದ ಹಬ್ಬವನ್ನು ಹಿಂದೂಗಳು ಮತ್ತು ಇತರ ಧರ್ಮದ ಜನರು ಕೂಡ ವಿಜೃಂಭಣೆಯಿಂದ ಆಚರಣೆ ಮಾಡುತ್ತಾರೆ. ಆದ್ದರಿಂದ ಸರ್ಕಾರ ಹೋಳಿ ಹಬ್ಬದ ದಿನ ರಜೆ ಘೋಷಳೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಅಂದಹಾಗೆ ತೆಲಂಗಾಣ ಸರ್ಕಾರವು ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಆದರೆ ನಮ್ಮ ಕರ್ನಾಟಕದಲ್ಲಿ ಸರ್ಕಾರ ಏನು ಮಾಡುತ್ತದೆ ಎಂದು ಕಾದು ನೋಡಬೇಕಿದೆ. ದೇಶದ ಮುಂಬೈ ಬಿಟ್ಟರೆ ಕರ್ನಾಟಕದ ದಾವಣಗೆರೆ, ಹುಬ್ಬಳ್ಳಿ ಜಿಲ್ಲೆಗಳಲ್ಲಿ ಹೋಳಿ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತದೆ. ಹೀಗಾಗಿ ಸರ್ಕಾರ ರಜೆ ಘೋಷಣೆ ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ. ಜೊತೆಗೆ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸ್ವಯಂ ಪ್ರೇರಿತವಾಗಿ ರಜೆಯನ್ನು ಕೂಡ ಘೋಷಿಸಬಹುದು.
