Home » ಮದುವೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ-ಹೊತ್ತಿ ಉರಿದ ಪೆಂಡಾಲ್!! ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆ -ತಪ್ಪಿದ ಅನಾಹುತ

ಮದುವೆ ಮನೆಯಲ್ಲಿ ಆಕಸ್ಮಿಕ ಬೆಂಕಿ ಅವಘಡ-ಹೊತ್ತಿ ಉರಿದ ಪೆಂಡಾಲ್!! ಅಗ್ನಿಶಾಮಕ ದಳದ ಕ್ಷಿಪ್ರ ಕಾರ್ಯಾಚರಣೆ -ತಪ್ಪಿದ ಅನಾಹುತ

0 comments

ಮದುವೆ ಮನೆಯಲ್ಲಿ ಹಾಕಿದ್ದ ಪೆಂಡಾಲ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಹೊತ್ತಿ ಉರಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಮಾರ್ಚ್ 24 ರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಓರ್ವ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನೆ ನಡೆದ ಕೂಡಲೇ ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಕೊಂಚ ತಡವರಿಸಿದ್ದರೆ ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎನ್ನುತ್ತಾರೆ ಪ್ರತ್ಯಕ್ಷದರ್ಶಿಗಳು. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

You may also like

Leave a Comment