4
Siddaramaiah: ಉದ್ಯೋಗಸ್ಥ ಮಹಿಳೆಯರಿಗೆ ಸಿಎಂ ಸಿದ್ದರಾಮಯ್ಯ ಅವರು ಖುಷಿ ಸುದ್ದಿ ನೀಡಿದ್ದಾರೆ. ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತು ಚಕ್ರ ರಜೆ ಅಥವಾ ಮುಟ್ಟಿನ ರಜೆ ನೀಡುವ ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವ ಹೆಚ್ ಕೆ ಪಾಟೀಲ್ ಅವರು ಮಾಹಿತಿ ನೀಡಿದರು.
ರಾಜ್ಯದ ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್, ಬಹುರಾಷ್ಟ್ರೀಯ ಕಂಪನಿಗಳು (MNC), ಐಟಿ, ಖಾಸಗಿ ಕೈಗಾರಿಕಾ ವಲಯಗಳಲ್ಲಿ ಮುಟ್ಟಿನ ರಜೆ ಅನ್ವಯವಾಗಲಿದೆ ಎಂದು ಪಾಟೀಲ್ ತಿಳಿಸಿದರು.
