Home » Udupi: ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್ ‌

Udupi: ಲೋಕಾಯುಕ್ತ ಬಲೆಗೆ ಬಿದ್ದ ಮೆಸ್ಕಾಂ ಇಂಜಿನಿಯರ್ ‌

by Mallika
0 comments

Udupi: ಬ್ರಹ್ಮಾವರ ಮೆಸ್ಕಾಂ ಸಹಾಯಕ ಇಂಜಿನಿಯರ್‌ ಅಶೋಕ್‌ ಪೂಜಾರಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಮನೆಯೊಂದಕ್ಕೆ ವಿದ್ಯುತ್‌ ಸಂಪರ್ಕ ನೀಡಲು ಅಶೋಕ್‌ ಪೂಜಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದು. ಕಳೆದ ತಿಂಗಳು ಸ್ಥಳ ಪರಿಶೀಲನೆ ಮಾಡಿ ರೂ.20000 ಲಂಚಕ್ಕೆ ಬೇಡಿ ಇಟ್ಟಿದ್ದರು.

ಈ ಕುರಿತು ದಿನೇಶ್‌ ಪೂಜಾರಿ ಎಂಬುವವರು ಲೋಕಾಯುಕ್ತಕ್ಕೆ ದೂರನ್ನು ನೀಡಿದ್ದರು. ಇಂದು ಲಂಚದ ಹಣ ಪಡೆಯುವ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ. ದಿನೇಶ್‌ ಪೂಜಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

You may also like