Minimum Support Prize: ರಾಜ್ಯದ ರೈತರು(Farmers) ಹೆಸರು ಕಾಳು(Moong dal) ಮತ್ತು ಸೂರ್ಕಾಂತಿಯನ್ನು(Sun flower) ಬೆಂಬಲ ಬೆಲೆ ಯೋಜನೆ(Support Prize scheme) ಅಡಿಯಲ್ಲಿ ತಂದು ಖರೀದಿಸಬೇಕೆಂದು ಒತ್ತಾಯಿಸಿದ್ದರು. ಅದರಂತೆ ರಾಜ್ಯ ಸರ್ಕಾರ(State Govt) ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ(Central Govt) ಸಲ್ಲಿಸಿತ್ತು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ(Shivananda Patila) ತಿಳಿಸಿದ್ದಾರೆ.
ಮಾರುಕಟ್ಟೆಯಲ್ಲಿ ಹೆಸರುಕಾಳು ಮತ್ತು ಸೂರ್ಯಕಾಂತಿ ಧಾರಣೆ ತೀರ ಕುಸಿದಿತ್ತು. ಈ ಕಾರಣ ಬೆಂಬಲ ಬೆಲೆ ಯೋಜನೆಯಲ್ಲಿ ಇವುಗಳ ಖರೀದಿಗೆ ಸಮ್ಮತಿ ನೀಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದೀಗ ಕೇಂದ್ರ ಸರ್ಕಾರ 22,215 ಮೆಟ್ರಿಕ್ ಟನ್ ಹೆಸರುಕಾಳು ಮತ್ತು 13,210 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಗೆ ಒಪ್ಪಿಗೆ ಸೂಚಿಸಿದೆ. ಈ ಬೆಂಬಲ ಬೆಲೆ ಯೋಜನೆಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಹೆಸರುಕಾಳಿಗೆ ಪ್ರತಿ ಕ್ವಿಂಟಾಲ್‌ಗೆ 8.682 ರೂ. ಮತ್ತು ಸೂರ್ಯಕಾಂತಿಗೆ 7,280 ರೂ. ಬೆಲೆ ನಿಗದಿಪಡಿಸಲಾಗಿದೆ.
ರಾಜ್ಯದ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಕಾರಣ ಖರೀದಿ ಏಜನ್ಸಿಗಳ ನೇಮಕ ಮಾಡಿ ಆದೇಶ ಹೊರಡಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಹಾಗಾಗಿ ಈಗ ರಾಜ್ಯದ ರೈತರು ಧಾರಣೆ ಕುಸಿದಿದೆ ಎಂದು ಹೆದರಬೇಕಾಗಿಲ್ಲ. ಖರೀದಿ ಕೇಂದ್ರಗಳು ಪ್ರಾರಂಭವಾಗುತ್ತಿದ್ದಂತೆ ನೋಂದಣಿ ಮಾಡಿಸಿಕೊಂಡು ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಿಕೊಳ್ಳಬಹುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸೂರ್ಯಕಾಂತಿ ಹಾಗೂ ಹೆಸರುಕಾಳು ಬೆಳೆ ಬೆಳೆಯುವ ಮುಖ್ಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಟಾಸ್ಕ್ ಪೋರ್ಸ್ ಸಭೆ ನಡೆಸಿ ಅಗತ್ಯ ಇರುವಲ್ಲಿ ಖರೀದಿ ಕೇಂದ್ರಗಳನ್ನು ಗುರುತು ಮಾಡಿ ನೋಂದಣಿ ಪ್ರಾರಂಭ ಮಾಡಲಿದ್ದಾರೆ. ಬಳಿಕ ರೈತರಿಂದ ಖರೀದಿ ಪ್ರಕ್ರಿಯೆ ಆರಂಭವಾಗಲಿದೆ. ಹಾಗೂ ವಿಳಂಬ ಮಾಡದೆ ಟಾಸ್ಕ್ ಫೋರ್ಸ್ ಸಭೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನವನ್ನು ಸಚಿವರು ನೀಡಿದ್ದಾರೆ. ರೈತರ ಹಿತದೃಷ್ಟಿ ಕಾಪಾಡುವ ನಿಟ್ಟಿನಲ್ಲಿ ಆದಷ್ಟು ಬೇಗ ನೋಂದಣಿ ಮತ್ತು ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವಾನಂದ ಪಾಟೀಲ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
