Home » Karnataka: ಶೀಘ್ರದಲ್ಲೇ ಕನಿಷ್ಠ ವೇತನ ಹೆಚ್ಚಳ?

Karnataka: ಶೀಘ್ರದಲ್ಲೇ ಕನಿಷ್ಠ ವೇತನ ಹೆಚ್ಚಳ?

by ಕಾವ್ಯ ವಾಣಿ
0 comments
Money Rules Changing from February 2024

Karnataka: ಕರ್ನಾಟಕ (Karnataka) ಸರ್ಕಾರವು ಕೌಶಲ್ಯಯುಕ್ತ ಮತ್ತು ಕೌಶಲ್ಯರಹಿತ ಕಾರ್ಮಿಕರ ಕನಿಷ್ಠ ವೇತನವನ್ನು ಹೆಚ್ಚಿಸಲು ಉದ್ದೇಶಿಸಿದೆ. 20,000 ರೂ. ವರೆಗೆ ಹೆಚ್ಚಳವಾಗುವ ನಿರೀಕ್ಷೆಯಿದೆ. ಕರಡು ಪ್ರಸ್ತಾವನೆಯನ್ನು ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಿ ಅನುಮೋದನೆ ಪಡೆದ ನಂತರ, ಮುಂದಿನ ಒಂದೆರಡು ವಾರಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು ಎಂದು ಕಾರ್ಮಿಕ ಇಲಾಖೆ ಮೂಲಗಳು ತಿಳಿಸಿವೆ.

ಕೌಶಲಯುಕ್ತ ಮತ್ತು ಕೌಶಲ್ಯ ರಹಿತ ಕಾರ್ಮಿಕರ ಕನಿಷ್ಠ ವೇತನ ಉದ್ದೇಶಿಸಿದ್ದು, ಮುಂದಿನ ಒಂದೆರಡು ವಾರಗಳ ಒಳಗೆ ಅಧಿಸೂಚನೆ ಹೊರಡಿಸುವ ನಿರೀಕ್ಷೆ ಇದೆ. ಒಂದು ವೇಳೆ, ಕರಡು ಪ್ರಸ್ತಾವನೆಯಲ್ಲಿ ಉಲ್ಲೇಖಿಸಿದಷ್ಟೇ ಪ್ರಮಾಣದಲ್ಲಿ ಕನಿಷ್ಠ ವೇತನ ಹೆಚ್ಚಳ ಮಾಡಿದ್ದೇ ಆದಲ್ಲಿ, ಕಾರ್ಮಿಕರಿಗೆ ದೇಶದಲ್ಲಿಯೇ ಅತಿ ಹೆಚ್ಚು ಕನಿಷ್ಠ ವೇತನ ನೀಡುವ ರಾಜ್ಯ ಎಂದು ಕರ್ನಾಟಕ ಗುರುತಿಸಿಕೊಳ್ಳಲಿದೆ. ಒಟ್ಟು 82 ವಿವಿಧ ಕೆಲಸಗಳಿಗೆ ಕಾರ್ಮಿಕರ ಕನಿಷ್ಠ ವೇತನ ಅನ್ವಯವಾಗಲಿದೆ. ಈ ಸಂಬಂಧ 2022 ರಲ್ಲಿ ಕರಡು ಅಧಿಸೂಚನೆ ಹೊರಡಿಸಲಾಗಿತ್ತು.

ಪ್ರಸ್ತುತ ಕರ್ನಾಟಕದಲ್ಲಿ ಕೌಶಲ ಸಹಿತ ಮತ್ತು ಕೌಶಲರಹಿತ ಕಾರ್ಮಿಕರ ಕನಿಷ್ಠ ವೇತನ ತಿಂಗಳಿಗೆ 12,000 ಇದೆ. ಪರಿಷ್ಕೃತ ಲೆಕ್ಕಾಚಾರದ ಪ್ರಕಾರ ಇದು 20,000 ರೂಪಾಯಿಗೆ ಹೆಚ್ಚಾಗಲಿದೆ. ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಸೇರಿದಂತೆ ವಿವಿಧ ವಲಯಗಳ ಸುಮಾರು 1.7 ಕೋಟಿ ಕಾರ್ಮಿಕರಿದ್ದಾರೆ.

” ಕನಿಷ್ಠ ವೇತನವನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಪ್ರಸ್ತಾವನೆಯನ್ನು ಅನುಮೋದನೆಗಾಗಿ ಕನಿಷ್ಠ ವೇತನ ಸಲಹಾ ಮಂಡಳಿಗೆ ಕಳುಹಿಸಬೇಕಾಗಿದೆ” ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

You may also like