1
Suicide: ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾದ ಘಟನೆ ಪಾಲಿಬೆಟ್ಟದಲ್ಲಿ ನಡೆದಿದೆ.
ಪಾಲಿಬೆಟ್ಟ ನಿವಾಸಿ ಪ್ರದೀಪ್ ಕುಮಾರ್ ಹಾಗೂ ಕವಿರತ್ನ ದಂಪತಿಯ ಪುತ್ರ ಮೃತ ಬಾಲಕ. ಈತ ಅಮ್ಮತ್ತಿ ನೇತಾಜಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಗುರುವಾರ ಸಂಜೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮ ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
