Belgavi: ಮಸೀದಿಯಲ್ಲಿದ್ದ ಕುರಾನ್ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ಮಸೀದಿಯೊಂದರ ಕಾಮಗಾರಿ ನಡೆಯುತ್ತಿತ್ತು. ಈ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ. ಇಂದು ಪ್ರಾರ್ಥನೆಗೆಂದು ಬಂದಾಗ ಕುರಾನ್, ಹದೀಸ್ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡುಬಂದಿದೆ. ಇದೀಗ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ತಡರಾತ್ರಿ ಮಸೀದಿಯೊಳಗಿನ ಕುರಾನ್ ಕದ್ದು ಕೊಂಡೊಯ್ದಿದ್ದಾರೆ. ಬಳಿಕ ಕುರಾನ್ ಪುಸ್ತಕವನ್ನು ಸುಟ್ಟು ಹಾಕಿದ್ದಾರೆಂಬ ಮಾಹಿತಿ ಇದೆ. ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಸದ್ಯ ಯುವಕರು ಪ್ರತಿಭಟನೆ ಮಾಡಲು ಅವಕಾಶ ಕೇಳಿದ್ದಾರೆ
