2
Chikkamagaluru: ಚಿಕ್ಕಮಗಳೂರು ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಮನೆ ಹಾಗೂ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಿದ ಘಟನೆ ನಡೆದಿದೆ. ಕಡೂರು ಪಟ್ಟಣದ ವೆಂಕಟೇಶ್ವರ ನಗರದಲ್ಲಿ ಸೋಮವಾರ ಬೆಳಿಗ್ಗೆ ಈ ಘಟನೆ ನಡೆದಿದೆ.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಭರತ್ ಕೆಂಪರಾಜು ಅವರ ಮನೆಯ ಮುಂದಿದ್ದ ಹೂವಿನ ಕುಂಡಗಳನ್ನು ಒಡೆದು ಹಾಕಿದ್ದು, ಇನ್ನೋವಾ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಕಾರಿನ ಬಾನೆಟ್, ಬಂಪರ್ ಒಡೆದು ಹಾಕಿ ರಾತ್ರೋರಾತ್ರಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ.
ಕಡೂರು ಪೊಲೀಸರು ಸ್ಥಳಕ್ಕೆ ತೆರಳಿದ್ದು, ತನಿಖೆ ನಡೆಸುತ್ತಿದ್ದಾರೆ.
