Home » MLC Election: ವಿಧಾನ ಪರಿಷತ್ ಉಪ ಚುನಾವಣೆ- ಉಡುಪಿ-ದಕ್ಷಿಣ ಕನ್ನಡದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಸಿದ ಕಾಂಗ್ರೆಸ್!!

MLC Election: ವಿಧಾನ ಪರಿಷತ್ ಉಪ ಚುನಾವಣೆ- ಉಡುಪಿ-ದಕ್ಷಿಣ ಕನ್ನಡದಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಸಿದ ಕಾಂಗ್ರೆಸ್!!

0 comments

MLC Election: ಬಿಜೆಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ(Kota Shrinivasa Poojary) ಅವರ ರಾಜೀನಾಮೆಯಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಬುಧವಾರ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ.

ಹೌದು, ದಕ್ಷಿಣ ಕನ್ನಡ(Dakshina Kannada) ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ಸ್ಥಾನಕ್ಕೆ ರಾಜು ಪೂಜಾರಿ ಬೈಂದೂರು(Raju Poojary Baindur) ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್‌ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ

ಅಂದಹಾಗೆ ಕಾಂಗ್ರೆಸ್‌ನಿಂದ ಐವರ ಹೆಸರುಗಳು ಕೇಳಿಬಂದಿದ್ದವು. ಆ ಪೈಕಿ ಕಾಂಗ್ರೆಸ್ ಹೈಕಮಾಂಡ್ ರಾಜು ಪೂಜಾರಿ ಅವರಿಗೆ ಟಿಕೆಟ್ ನೀಡಿದೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.

ಕಿಶೋರ್ ಪುತ್ತೂರ್‌ಗೆ ಬಿಜೆಪಿ ಟಿಕೆಟ್ ನೀಡಿದೆ. ಇದೇ ಅಕ್ಟೋಬರ್ 21ರಮದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್ ಸ್ಥಾನದ ಉಪಚುನಾವಣೆ ನಡೆಯಲಿದೆ.

You may also like

Leave a Comment