1
Mobile Blast: ಮೊಬೈಲ್ ವಿಚಾರವಾಗಿ ನಾವು ಎಷ್ಟೇ ಜಾಗರೂಕತೆಯಿಂದ ಇದ್ದರೂ ಕೂಡ ಅದು ಕಡಿಮೆ ಎನಿಸುತ್ತದೆ. ಯಾಕೆಂದರೆ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಾಗಲೇ ರೋಗಿ ಒಬ್ಬರ ಮೊಬೈಲ್ ಸ್ಪೋಟಗೊಂಡಂತಹ ಪ್ರಕರಣ ಬೆಳಕಿಗೆ ಬಂದಿದೆ.
ಹೌದು, ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಶನಿವಾರ ಕೊತ್ವಾಲಿ ಪ್ರದೇಶದ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಜೇಬಿನಲ್ಲಿದ್ದ ಮೊಬೈಲ್ ಸ್ಫೋಟಗೊಂಡ ಆಘಾತಕಾರಿ ಘಟನೆ ವರದಿಯಾಗಿದೆ.
ಅಂದಹಾಗೆ ಅಪಘಾತ ಒಂದರಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳಿಯರು ಆಸ್ಪತ್ರೆಗೆ ಸೇರಿಸಿದ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ, ಅವರ ಜೇಬಿನಿಂದ ಹೊಗೆ ಹೊರಬರಲು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಕೆಲವೇ ಸೆಕೆಂಡುಗಳಲ್ಲಿ ಸ್ಫೋಟ ಸಂಭವಿಸಿ ವಾರ್ಡ್ ಒಳಗೆ ಬೆಂಕಿ ಕಾಣಿಸಿಕೊಂಡಿತು. ಆಸ್ಪತ್ರೆ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಬೆಂಕಿಯನ್ನು ನಂದಿಸಿದರು.
