Hubballi: ಚಿಕ್ಕ ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಮೊಬೈಲ್ ಬಳಕೆ ಪ್ರಮುಖ ಕಾರಣ ಎಂದು ಹುಬ್ಬಳ್ಳಿಯ ಕರ್ನಾಟಕ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ) ವೈದ್ಯರ ತಂಡ ನಡೆಸಿದ ಅಧ್ಯಯನದಿಂದ ಬೆಳಕಿಗೆ ಬಂದಿದೆ.
8 ಮತ್ತು 9 ನೇ ತರಗತಿ ಅಧ್ಯಯನ ಮಾಡುವ, ಬೊಜ್ಜು ಹೆಚ್ಚಿರುವ ವಿದ್ಯಾರ್ಥಿಗಳನ್ನು ಆಯ್ಕೆ ಅಧ್ಯಯನ ಮಾಡಿದಾಗ ಈ ವಿಷಯ ಬೆಳಕಿಗೆ ಬಂದಿದೆ. ದೈಹಿಕ ಚಟುವಟಿಕೆ ಇಲ್ಲದಿರುವುದು, ಮೊಬೈಲ್‌ನಲ್ಲಿಯೇ ಹೆಚ್ಚು ಸಮಯ ಕಳೆಯುವುದು, ಜಂಕ್‌ಫುಡ್ ಸೇವನೆ ಮಕ್ಕಳ ಆರೋಗ್ಯವನ್ನು ಕಸಿದು ಕೊಂಡಿದೆ ಎಂದು ಅಧ್ಯಯನದಲ್ಲಿ ಪತ್ತೆ ಆಗಿದೆ.
ಚಿಕ್ಕ ವಯಸ್ಸಿನಲ್ಲಿಯೇ ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ ಸೇರಿ ವಿವಿಧ ಕಾಯಿಲೆಗಳ ಲಕ್ಷಣಗಳು ಪತ್ತೆಯಾಗಿದೆ. ಮಕ್ಕಳ ಆರೋಗ್ಯದ ಕುರಿತು ಆ ವಿದ್ಯಾರ್ಥಿಗಳ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಜೀವನ ಜೈಲಿಯಲ್ಲಿ ಮಾಡಬೇಕಾದ ಬದಲಾವಣೆಯಲ್ಲಿ ತಿಳಿಸಿಕೊಟ್ಟಿದ್ದಾರೆ.
ಕೆಎಂಸಿಆರ್‌ಐ ಆಸ್ಪತ್ರೆಯ ಬಹುವಿಭಾಗೀಯ ಸಂಶೋಧನಾ ಘಟಕದ ನೋಡಲ್ ಅಧಿಕಾರಿ ಡಾ। ರಾಮ ಕೌಲಗುಡ್ಡ, ಸಮುದಾಯ ಆರೋಗ್ಯ ವಿಭಾಗದ ಸಹ ಪ್ರಾಧ್ಯಾಪಕ ಡಾ। ಮಂಜುನಾಥ ನೇಕಾರ, ವಿಜ್ಞಾನಿಗಳಾದ ಡಾ। ಶಿವಕುಮಾರ ಬೇಲೂರ ಮತ್ತು ಡಾ। ಅರುಣ ಶೆಟ್ಟರ ಅವರ ತಂಡ ಮಕ್ಕಳ ಮೇಲೆ ಈ ಕುರಿತು ಅಧ್ಯಯನ ನಡೆಸಿದೆ ಎಂದು ವರದಿಯಾಗಿದೆ.
