Home » Modi Government: ಗಣೇಶನ ಹಬ್ಬಕ್ಕೆ ಮೋದಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!

Modi Government: ಗಣೇಶನ ಹಬ್ಬಕ್ಕೆ ಮೋದಿ ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!

0 comments
Modi Government

Modi Government: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚವಾಣ್ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ (Modi Government) ತೆರೆಯಲು ಅನುಮತಿ ನೀಡಿದೆ.

ಹೌದು, ಈಗಾಗಲೇ ಹೆಸರು ಮತ್ತು ಸೂರ್ಯಕಾಂತಿ ಬೆಳೆಯನ್ನು ಬೆಂಬಲ ಬೆಲೆಯಲ್ಲಿ (Minimum Support Price) ಖರೀದಿಸಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ, ಇದೀಗ ಉದ್ದು ಮತ್ತು ಸೋಯಾಬಿನ್ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ಸದ್ಯ ಕರ್ನಾಟಕದಲ್ಲಿ 2024-25 ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್ ಟನ್ ಉದ್ದು ಹಾಗೂ 1,03,315 ಮೆಟ್ರಿಕ್ ಟನ್ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಆಗಸ್ಟ್ 29 ರಂದು ಆದೇಶ ಹೊರಡಿಸಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಉದ್ದಿನ ಕಾಳು 7,400 ರು. ಮತ್ತು ಸೋಯಾಬಿನ್ ಗೆ 4,892 ರು. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6,950 ರು. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರು. ಹೆಚ್ಚಳ ಕಂಡಿದೆ. 4,600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರು. ಹೆಚ್ಚಳವಾಗಿದೆ ಎಂದು ಸಚಿವರು ಮಾಹಿತಿಯನ್ನು ನೀಡಿದ್ದಾರೆ.

ಈ ಕುರಿತು ರಾಜ್ಯ ಸರ್ಕಾರ ತಕ್ಷಣವೇ ರಾಜ್ಯಾದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ, ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

You may also like

Leave a Comment