Bengaluru: ಒಂದೂವರೆ ತಿಂಗಳ ಹಸುಗೂಸು ಗಂಡು ಮಗುವನ್ನು ಶೌಚಾಲಯದಲ್ಲಿ ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ವಿಶ್ವೇಶ್ವರಪುರದಲ್ಲಿ ನಡೆದಿದೆ. ಬಡತನ ಹಾಗೂ ಮಗುವಿನ ಆರೈಕೆ ಕಷ್ಟವಾದ ಹಿನ್ನೆಲೆ ಮಗುವನ್ನು ತಾಯಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ.
ನಗರದ ವಿಶ್ವೇಶ್ವರಪುರದಲ್ಲಿ ವಾಸವಾಗಿದ್ದ ಪವನ್ ಮತ್ತು ರಾಧಾ ದಂಪತಿಯ ಗಂಡು ಮಗುವನ್ನು ತಡರಾತ್ರಿ ನೀರಿನಲ್ಲಿ ಮುಳುಗಿಸಿ ಕೊಲೆ ಮಾಡಿದ್ದು, ಸ್ಥಳಕ್ಕೆ ನೆಲಮಂಗಲ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಆರೋಪಿ ರಾಧಾಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪತಿ ಪವನ್ ಆಟೋ ಡೈವರ್ ಆಗಿದ್ದು, ಪ್ರತಿನಿತ್ಯ ಮದ್ಯಪಾನ ಮಾಡುತ್ತಿದ್ದ ಎನ್ನಲಾಗಿದೆ. ಇನ್ನೂ ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಹಾಗೂ ಮನಸ್ತಾಪ ಇದ್ದು, ಮಗುವಿನ ಕೊಲೆಗೆ ನಿಖರವಾದ ಕಾರಣ ಕಲೆಹಾಕಲು ನೆಲಮಂಗಲ ಟೌನ್ ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ: Uppinangady: ಉಪ್ಪಿನಂಗಡಿ: ಅಕ್ರಮ ದನ ಸಾಗಾಟ: ಮೂವರು ಆರೋಪಿಗಳು ಅರೆಸ್ಟ್!
