Home » Davanagere: ಸಂಚಾರ ನಿಯಮ ಉಲ್ಲಂಘಿಸಿದ ತಾಯಿಗೆ 25,000 ರೂ. ದಂಡ

Davanagere: ಸಂಚಾರ ನಿಯಮ ಉಲ್ಲಂಘಿಸಿದ ತಾಯಿಗೆ 25,000 ರೂ. ದಂಡ

by ಕಾವ್ಯ ವಾಣಿ
0 comments

Davanagere: ದಾವಣಗೆರೆಯಲ್ಲಿ (Davanagere) , ಮಗಳಿಗೆ ಆಕ್ಟಿವ್ ಹೋಂಡಾ ಚಾಲನೆಗೆ ಅವಕಾಶ ಮಾಡಿಕೊಟ್ಟ ತಾಯಿಗೆ ಸಂಚಾರ ಪೊಲೀಸರು 25 ಸಾವಿರ ರೂ. ದಂಡ ವಿಧಿಸಿದ್ದಾರೆ.

ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಅಪ್ರಾಪ್ತ ಬಾಲಕಿಯೊಬ್ಬಳು ಆಕ್ಟಿವ್ ಹೊಂಡಾ ಚಲಾಯಿಸುತ್ತಿದ್ದನ್ನು ತಡೆದ ಟ್ರಾಫಿಕ್ ಪೊಲೀಸರು ದಾಖಲೆ ಪರಿಶೀಲನೆ ಮಾಡಿದ್ದಾರೆ. ಇದೇ ವೇಳೆ, ಅದನ್ನು ಚಲಾಯಿಸುತ್ತಿರುವುದು ಅಪ್ರಾಪ್ತ ಬಾಲಕಿ ಎಂಬುದು ದೃಢವಾದ ನಂತರ ಪೊಲೀಸರು ಆಕೆಯ ತಾಯಿಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ದಾವಣಗೆರೆ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

You may also like