Home » ಮುಡಿಪು : ಚಿನ್ನದಂಗಡಿಯ ಗೋಡೆ ಕೊರೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಮುಡಿಪು : ಚಿನ್ನದಂಗಡಿಯ ಗೋಡೆ ಕೊರೆದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

by Praveen Chennavara
0 comments

ಮಂಗಳೂರು :ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆ ಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ.

ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿ ಹೆಸರಿನ ಚಿನ್ನದಂಗಡಿಯಲ್ಲಿ ಕಳವು ಮಾಡಲಾಗಿದೆ.

ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದ್ದು, ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ಕೈ ಗೆತ್ತಿಕೊಂಡಿದ್ದಾರೆ.

You may also like

Leave a Comment