Home » ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನ

by Mallika
0 comments

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಸೋಮವಾರ ಬೆಳಿಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು.

ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.

ಮುಲಾಯಂ ಸಿಂಗ್ ಯಾದವ್ ಅವರು ಆಗಸ್ಟ್ 22 ರಿಂದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ (ಅಕ್ಟೋಬರ್ 2) ಅವರ ಆರೋಗ್ಯ ಹದಗೆಟ್ಟಿದ್ದರಿಂದ ವೈದ್ಯರು ಅವರನ್ನು ಐಸಿಯುಗೆ ಸ್ಥಳಾಂತರ ಮಾಡಿದ್ದರೆನ್ನಲಾಗಿದೆ. ಅವರನ್ನು ಜೀವರಕ್ಷಕ ವ್ಯವಸ್ಥೆಯಲ್ಲಿ ಅಂದರೆ ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಆರನೇ ದಿನವೂ ಅಂದರೆ ಅಕ್ಟೋಬರ್ 7 ರಿಂದಲೇ ಮುಲಾಯಂ ಸಿಂಗ್ ವೆಂಟಿಲೇಟರ್‌ನಲ್ಲಿದ್ದರು. ಕಳೆದ 6 ದಿನಗಳಿಂದ ಮುಲಾಯಂ ಸಿಂಗ್ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಸುಧಾರಣೆಯಾಗಿರಲಿಲ್ಲ. ಹಾಗೂ ಅವರು ವೆಂಟಿಲೇಟರ್‌ನಲ್ಲೇ ಇದ್ದರು. ಅವರ ಸ್ಥಿತಿ ಗಂಭೀರವಾಗಿದೆ, ಅವರಿಗೆ ಜೀವರಕ್ಷಕ ಔಷಧಿಗಳನ್ನು ನೀಡಲಾಗುತ್ತಿದೆ ಎಂಬ ಮಾಹಿತಿಯನ್ನು ಆಸ್ಪತ್ರೆ ಮೂಲಗಳು ತಿಳಿಸಿದ್ದವು.

ಈಗ ಚಿಕಿತ್ಸೆ ಫಲಕಾರಿಯಾಗದೆ ಮುಲಾಯಂ ಸಿಂಗ್ ಯಾದವ್ ಅವರು ನಿಧನ ಹೊಂದಿದ್ದಾರೆ.

You may also like

Leave a Comment