Waqf bill: ಹಲವು ವಿವಾದ ಹಾಗೂ ವಿರೋಧಗಳ ನಡುವೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆಯಾಗಿ, ಬಹುಮತಗಳಿಂದ ಅಂಗೀಕಾರ ಕೂಡ ಆಗಿದೆ. ಆದರೆ ಕೆಲವು ರಾಜ್ಯಗಳು ತಾವು ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯದಲ್ಲಿ ಜಾರಿ ಮಾಡುವುದಿಲ್ಲ ಎಂದು ಘೋಷಿಸಿದೆ. ಜೊತೆಗೆ ಸುಪ್ರೀಂ ಕೋರ್ಟ್ ಕೂಡ ಕೇಂದ್ರ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. ಆದರೆ ಈ ಬೆನ್ನಲ್ಲೇ ಮುಸ್ಲಿಂ ಯೋಗವೆಂದು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೊಳಿಸಿದ್ದಕ್ಕೆ ಧನ್ಯವಾದಗಳನ್ನು ಅರ್ಪಿಸಿದೆ.
ಹೌದು, ಮುಸ್ಲಿಮರ ನಿಯೋಗವೊಂದು ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಕಾಯಿದೆ ತಂದಿದ್ದಕ್ಕೆ ಧನ್ಯವಾದ ಸಲ್ಲಿಸಿದೆ. ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ತಂದಿರುವ ವಕ್ಫ್ ತಿದ್ದುಪಡಿ ಕಾಯಿದೆಯ ಎರಡು ಅಂಶಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದು, ಮುಂದಿನ ವಿಚಾರಣೆಯನ್ನು ಮೇ 5 ಕ್ಕೆ ಮುಂದೂಡಿದ ಸಂದರ್ಭದಲ್ಲಿ ಮುಸ್ಲಿಮ್ ನಿಯೋಗವೊಂದು ಭೇಟಿ ಮಾಡಿ ಧನ್ಯವಾದ ಸಲ್ಲಿಸಿರುವುದು ವಿಶೇಷ.
ಅಂದಹಾಗೆ ದಾವೂದಿ ಬೊಹ್ರಾ ಸಮುದಾಯದ ನಿಯೋಗ ಇಂದು ಪ್ರಧಾನಿ ಮೋದಿಯವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿತು. ಇದು ಬೊಹ್ರಾ ಸಮುದಾಯದ ದೀರ್ಘಕಾಲದ ಬೇಡಿಕೆಯಾಗಿತ್ತು ಎಂದಿದ್ದಾರೆ. ನಾವು ಪ್ರಧಾನ ಮಂತ್ರ ನರೇಂದ್ರ ಮೋದಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಸಬ್ ಕಾ ವಿಶ್ವಾಸ್ ದೃಷ್ಟಿಕೋನದಲ್ಲಿ ನಂಬಿಕೆಯಿಟ್ಟಿದ್ದೇವೆ ಎಂದಿದ್ದಾರೆ. ಇದರೊಂದಿಗೆ ಎಲ್ಲಾ ಮುಸ್ಲಿಮ್ ಸಮುದಾಯದವರೂ ವಕ್ಫ್ ತಿದ್ದುಪಡಿ ಕಾಯಿದೆಯನ್ನು ವಿರೋಧಿಸುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.
