10
Mysuru Dasara: ಮೈಸೂರು ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಹೆಚ್‌ಎಸ್ ಗೌರವ್ ಎಂಬುವವರು ಸುಪ್ರೀಂನಲ್ಲಿ ಪ್ರಶ್ನೆ ಮಾಡಿದ್ದಾರೆ.
ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ಇವರು ಸೆ.22 ರಂದು ದಸರಾ ಉದ್ಘಾಟನೆ ನಡೆಯಲಿದ್ದು, ಹೀಗಾಗಿ ತುರ್ತು ಅರ್ಜಿ ವಿಚಾರಣೆ ಮಾಡಬೇಕೆಂದು ಸಿಜೆಐ ಗವಾಯಿ ಮುಂದೆ ಮನವಿ ಮಾಡಿದ್ದಾರೆ. ಕೋರ್ಟ್ ಶುಕ್ರವಾರ ಅರ್ಜಿಯ ವಿಚಾರಣೆ ಮಾಡುವುದಾಗಿ ಹೇಳಿದೆ.
