3
Death: ನಿವೃತ್ತ ನ್ಯಾಯಮೂರ್ತಿ ಎಸ್.ಆರ್ ನಾಯಕ್ (80) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ (Death) .
ಎಸ್.ಆರ್. ನಾಯಕ್ 1944ರಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಜನಿಸಿದರು. ಅವರ ಪೂರ್ಣ ಹೆಸರು ಸುಬ್ರಾಯ್ ರಾಮ ನಾಯಕ್ ಆಗಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಪ್ರಥಮ ಅಧ್ಯಕ್ಷರಾಗಿದ್ದರು. ಕರ್ನಾಟಕ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಎಸ್.ಆರ್ ನಾಯಕ್ ಸೇವೆಯನ್ನು ಪರಿಗಣಿಸಿ, ಹಂಪಿಯ ಕನ್ನಡ ವಿಶ್ವವಿದ್ಯಾಲಯವು ನಾಡೋಜ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
