Home » Nalin Kumar Kateel: ನಳೀನ್ ಕುಮಾರ್ ಕಟೀಲ್ ಗೆ ಭರ್ಜರಿ ಗಿಫ್ಟ್ ನೀಡಿದ ಬಿಜೆಪಿ ಹೈಕಮಾಂಡ್ – ಮತ್ತೆ ಸುತ್ತಾಟ ಆರಂಭ !!

Nalin Kumar Kateel: ನಳೀನ್ ಕುಮಾರ್ ಕಟೀಲ್ ಗೆ ಭರ್ಜರಿ ಗಿಫ್ಟ್ ನೀಡಿದ ಬಿಜೆಪಿ ಹೈಕಮಾಂಡ್ – ಮತ್ತೆ ಸುತ್ತಾಟ ಆರಂಭ !!

0 comments

Nalin Kumar Kateel: ದ.ಕ.ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ (Nalin Kumar Kateel) ನಳೀನ್ ಕುಮಾರ್ ಕಟೀಲ್ ಅವರು ಎಂಪಿ ಚುನಾವಣೆಯಲ್ಲಿ ಟಿಕೆಟ್ ಸಿಗದೆ, ಸದ್ಯ ಬಿಜೆಪಿ ನಾಯಕರಿಂದ ನಿರ್ಲಕ್ಷ್ಯಕ್ಕೊಳಗಾಗಿ ಇದೀಗ ಮನೆಯಲ್ಲಿ ಕೂರುವ ಪರಿಸ್ಥಿತಿ ಎದುರಾಗಿತ್ತು. ಆದರೀಗ ಇದ್ದಕ್ಕಿದ್ದಂತೆ ಬಿಜೆಪಿಯು ನಳೀನ್ ಅವರಿಗೆ ಗುಡ್ ನ್ಯೂಸ್ ಕೊಟ್ಟಿದೆ.

ಹೌದು, ಬಿಜೆಪಿಯು(BJP) ನಳೀನ್ ಕುಮಾರ್ ಕಟೀಲ್ ಅವರನ್ನು ಒಡಿಶಾ ರಾಜ್ಯದ ಬಿಜೆಪಿ ಸದಸ್ಯತ್ವ ಅಭಿಯಾನದ ಉಸ್ತುವಾರಿಯಾಗಿ ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.
ಅಂದಹಾಗೆ ಒಡಿಶಾದಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸದಸ್ಯತ್ವದ ಗುರಿಯನ್ನು ನೀಡಿದ್ದು, ಕೇಂದ್ರ ನಾಯಕತ್ವ ನಳಿನ್ ಕುಮಾ‌ರ್ ಕಟೀಲ್‌ಗೆ ಈ ಜವಾಬ್ದಾರಿ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಸೆ.17ರಂದು ಒಡಿಶಾಗೆ ತೆರಳಲಿದ್ದು, ಅಲ್ಲಿ ಒಂದು ವಾರ ಕಾಲ ಸದಸ್ಯತ್ವ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ

You may also like

Leave a Comment