
Namaz: ಅನುಮತಿಯಿಲ್ಲದೇ ಖಾಲಿ ಮನೆಯೊಂದರಲ್ಲಿ ನಮಾಜ್ (Namaz) ಮಾಡುತ್ತಿದ್ದ ಕಾರಣಕ್ಕೆ 12 ಮಂದಿಯನ್ನ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಭಾನುವಾರ (ಇಂದು) ಬರೇಲಿ (Bareilly) ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ.

ಖಾಲಿಯಿದ್ದ ಮನೆಯೊಂದರಲ್ಲಿ ನಮಾಜ್ ಮಾಡುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿತ್ತು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅನುಮತಿಯಿಲ್ಲದೇ ನಮಾಜ್ ಮಾಡುತ್ತಿದ್ದವರನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಎಸ್‌ಪಿ (ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾರೆ.
ಅನುಮತಿಯಿಲ್ಲದೇ ಯಾವುದೇ ರೀತಿಯ ಧಾರ್ಮಿಕ ಚಟುವಟಿಕೆಗಳನ್ನ ನಡೆಸುವುದು ಕಾನೂನಿನ ಉಲ್ಲಂಘನೆಯಾಗಿದೆ. ಅಂತಹ ಚಟುವಟಿಕೆಗಳು ಪುನರಾವರ್ತನೆಯಾದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಅಂಶಿಕಾ ವರ್ಮಾ ಎಚ್ಚರಿಕೆ ನೀಡಿದ್ದಾರೆ.
ವಶಕ್ಕೆ ಪಡೆದಿದ್ದ 12 ಜನರ ವಿರುದ್ಧ ಶಾಂತಿ ಉಲ್ಲಂಘನೆಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.
