Home » ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆ ಬ್ರದರ್ಸ್ ಗೆ ಕಂಟಕ

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆ ಬ್ರದರ್ಸ್ ಗೆ ಕಂಟಕ

0 comments

Bengaluru: ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಬೆಳಕಿಗೆ ಬಂದಿದ್ದು, ಭಾರೀ ಸದ್ದು ಮಾಡಿದ್ದ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್​ ಬುಡಕ್ಕೆ ಬಂದು ನಿಂತಿದೆ ಎನ್ನಲಾಗುತ್ತಿದೆ. ಈ ಸಂಬಂಧ ಡಿಕೆ ಬ್ರದರ್ಸ್​ಗೆ ಇಡಿ ಸಂಕಷ್ಟ ಒಳಗಾಗುವ ಸಾಧ್ಯತೆಗಳಿದ್ದು, ಇನ್ನು ಫಂಡ್​ ನೀಡಿರುವ ಬಗ್ಗೆ ಡಿಕೆಶಿ ಹಾಗೂ ಸುರೇಶ್​ ಒಪ್ಪಿಕೊಂಡಿರುತ್ತಾರೆ.

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಈಗ ಡಿಸಿಎಂ ಡಿಕೆ ಶಿವಕುಮಾರ್  ಹಾಗೂ ಮಾಜಿ ಸಂಸದ ಡಿಕೆ ಸುರೇಶ್​ ಬುಡಕ್ಕೆ ಬಂದಿದ್ದು, ಯಂಗ್‌ ಇಂಡಿಯಾಗೆ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ 2.5 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ED) ಚಾರ್ಜ್ ಶೀಟ್ ನಲ್ಲಿ ಇಬ್ಬರ ಹೆಸರು ಉಲ್ಲೇಖಿಸಿದೆ ಎನ್ನಲಾಗಿದೆ. ಹೀಗಾಗಿ ಡಿಕೆ ಬ್ರದರ್ಸ್​ಗೆ ಇಡಿ ಸಂಕಷ್ಟ ಎದುರಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಇಬ್ಬರು, ನಾನು 25 ಲಕ್ಷ, ನನ್ನ ತಮ್ಮ ಡಿ.ಕೆ.ಸುರೇಶ್ 25 ಲಕ್ಷ ಕೊಟ್ಟಿದ್ದೇವೆ, ನಮ್ಮ ಪಕ್ಷ ನಡೆಸುತ್ತಿದ್ದ ಪತ್ರಿಕೆಗೆ ದೇಣಿಗೆ ಕೊಟ್ಟರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಡಿಕೆ ಶಿವಕುಮಾರ್, ನಾವು ಕದ್ದು ಕೊಟ್ಟಿಲ್ಲ ನಮ್ಮ ಸ್ವಂತ ಸಂಪಾದನೆ ಇಂದ ರಾಜಾರೋಷವಾಗಿಯೇ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದ್ದು,

ಮಾಜಿ ಸಂಸದ ಡಿಕೆ ಸುರೇಶ್​ ಪ್ರತಿಕ್ರಿಯಿಸಿ, ಯಂಗ್ ಇಂಡಿಯಾ ಟ್ರಸ್ಟ್ ಗೆ ಹಣ ಕೊಟ್ಟಿದ್ದೇವೆ. ಎರಡು, ಎರಡೂವರೆ ಕೋಟಿ ರೂ. ಹಣ ಕೊಟ್ಟಿದ್ದೇವೆ. ಈ ಸಂಬಂಧ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರ ಕೊಟ್ಟಿದ್ದೇವೆ. ನಾವು ಕೊಟ್ಟಿಲ್ಲ ಅಂತ ಹೇಳುತ್ತಿಲ್ಲ. ನಾವು ಕಾನೂನಾತ್ಮಕವಾಗಿ‌ ಹೋರಾಟ ಮಾಡುತ್ತೇವೆ. ಇದು ರಾಜಕೀಯ ಪೂರಿತವಾದ ಪ್ರಕರಣ. ಅವರು ಕೂಡ ವೈಯುಕ್ತಿಕವಾಗಿ ಹಣ ಬಳಸಿಕೊಂಡಿಲ್ಲ. ಅದು‌ ಟ್ರಸ್ಟ್ ಗೆ ಬಳಕೆಯಾಗಿದೆ. ಇಡಿಯವರಿಗೂ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ಇದರಲ್ಲಿ ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಹೇಳಿರುತ್ತಾರೆ.

You may also like