Home » ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ ಶಿಕ್ಷಕ ಕುಮಾರ್ ಮಾಸ್ತರ್ ಕುಮಾರಮಂಗಲ ನಿಧನ

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಿವೃತ ಶಿಕ್ಷಕ ಕುಮಾರ್ ಮಾಸ್ತರ್ ಕುಮಾರಮಂಗಲ ನಿಧನ

by Praveen Chennavara
0 comments

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿ ಅನುಪಮ ಸೇವೆ ಸಲ್ಲಿಸಿ ವಿಶ್ರಾಂತ ಜೀವನ ನಡೆಸುತ್ತಿದ್ದ ಕುಮಾರ್ ಮಾಸ್ತರ್ ಕುಮಾರಮಂಗಲ (68 ವ) ಇವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಆ.24 ರಂದು ನಿಧನ ಹೊಂದಿದರು.

ಸುದೀರ್ಘ 36 ವರುಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಇವರು 1994ರಲ್ಲಿ ಜಿಲ್ಲಾ 2009 ರಲ್ಲಿ ರಾಜ್ಯ ಹಾಗೂ 2011ರಲ್ಲಿ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರಾಗಿ ಪುರಸ್ಕೃತಗೊಂಡಿದ್ದರು.

ಸಾರ್ವಜನಿಕ ಜೀವನದಲ್ಲಿ ತೊಡಗಿಸಿಕೊಂಡಿದ್ದ ಇವರು ಪುತ್ತೂರು ಲಯನ್ಸ್ ಕ್ಲಬ್ ಕಾರ್ಯದರ್ಶಿಯಾಗಿ, ಪುತ್ತೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಇದರ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಪ್ರಸ್ತುತ ಕರ್ನಾಟಕ ರಾಜ್ಯ ಮೊಗೇರ ಸಂಘದ ಗೌರವಾಧ್ಯಕ್ಷರಾಗಿದ್ದರು. ಮೃತರು ಪತ್ನಿ ವಿಜಯಲಕ್ಷ್ಮಿ, ಪುತ್ರರಾದ ಶಿವಪ್ರಸಾದ್, ಶರತ್, ಭರತ್ ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

You may also like

Leave a Comment