9
Physiotherapy Course: ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಫಿಸಿಯೋಥೆರಪಿ ಕೋರ್ಸ್ ಪ್ರವೇಶಕ್ಕೆ ನೀಟ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದ್ದಾರೆ. ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಚಿಕಿತ್ಸಾ ಕ್ರಮವನ್ನು ಆಳವಾಗಿ ಅರಿಯಲು ಸಾಧ್ಯವಾಗುತ್ತದೆ ಎಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಪ್ರಾರಂಭವಾದ ʼಕರ್ನಾಟಕ ಫಿಸಿಯೋಕಾನ್-2025′ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.
ನಗರದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್ ಕೌನ್ಸಿಲ್ (ಕೆಎಸ್ಎಎಚ್‌ಸಿ) ಹೊಸ ಕಚೇರಿಯನ್ನು ಆರಂಭಿಸಲಾಗಿದೆ. ಈ ವರ್ಷ ಅಲೈಡ್ ಸೈನ್ಸ್‌ನ 28 ಕಾಲೇಜುಗಳು ಆರಂಭಕ್ಕೆ ಅನುಮತಿ ನೀಡಲಾಗಿದೆ. ಫಿಸಿಯೋಥೆರಪಿ ಕೋರ್ಸ್ ಆರಂಭಕ್ಕೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುತ್ತದೆ. ವೃತ್ತಿಪರರಿಂದ ಗುಣಮಟ್ಟದ ಮತ್ತು ನಿಖರವಾದ ಫಿಸಿಯೋಥೆರಪಿ ಸೇವೆ ಸಿಗುತ್ತದೆ. ಅಲ್ಲದೇ, ನಕಲಿ ಫಿಸಿಯೋಥೆರಪಿಸ್ಟ್‌ಗಳನ್ನು ಪತ್ತೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
