Home » Neha murder: ನೇಹಾ ಹಿರೇಮಠ ಹತ್ಯೆ ಪ್ರಕರಣ; ಆರೋಪಿ ಫಯಾಜ್ ಜಾಮೀನು ಅರ್ಜಿ ತಿರಸ್ಕಾರ

Neha murder: ನೇಹಾ ಹಿರೇಮಠ ಹತ್ಯೆ ಪ್ರಕರಣ; ಆರೋಪಿ ಫಯಾಜ್ ಜಾಮೀನು ಅರ್ಜಿ ತಿರಸ್ಕಾರ

0 comments

Neha Murder: ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಜೆಎಂಎಫ್ ಒಂದನೆಯ ನ್ಯಾಯಾಲಯವು ಆರೋಪಿಯ ಜಾಮೀನು ಅರ್ಜಿ ತಿರಸ್ಕರಿಸಿತು, ಅಲ್ಲದೇ ಪ್ರಕರಣದ ವಿಚಾರಣೆಯನ್ನು ಸೆ.6ಕ್ಕೆ ಮುಂದೂಡಿತು.

ಆರೋಪಿ ಫಯಾಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು (ಆ.4) ನಡೆಸಿರುವ ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಸತ್ರ ಕೋರ್ಟ್ ಈ ಆದೇಶ ಮಾಡಿದ್ದಲ್ಲದೇ, ಮುಂದಿನ ವಿಚಾರಣೆಯನ್ನು ಆಗಸ್ಟ್ 10ಕ್ಕೆ ಮುಂದೂಡಿದೆ. ಅಲ್ಲದೇ ಆಗಸ್ಟ್ 6ರಂದು ಕೋರ್ಟ್‌ ಹಾಜರಾಗುವಂತೆಯೂ ಆರೋಪಿಗೆ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕೊಲೆ ಪ್ರಕರಣದಲ್ಲಿ ಕಳೆದ ಒಂದು ವರ್ಷ 4 ತಿಂಗಳಿನಿಂದ ಫಯಾಜ್ ಜೈಲಿನಲ್ಲಿದ್ದಾನೆ. ಇನ್ನೂ ಹೈಕೋರ್ಟ್‌ ಆರೋಪಿ ಪರ ವಕೀಲರು ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಿಗೆ ಬೇಲ್ ನೀಡಿದಂತೆಯೇ ತಮಗೂ ಜಾಮೀನು ಮಂಜೂರು ಮಾಡಬೇಕು ಎಂದು ಹಂತಕ ಕೋರ್ಟ್‌ ಮನವಿ ಮಾಡಿದ್ದ ಎಂದೂ ತಿಳಿದುಬಂದಿದೆ.

ಇದನ್ನು ಓದಿ: Share Market: ಭಾರತೀಯ ಷೇರು ಮಾರುಕಟ್ಟೆ ಏರಿಕೆ, ಸೆನ್ಸೆಕ್ಸ್ 418 ಅಂಕಗಳ ಜಿಗಿತ – ಅಮೆರಿಕ ಡಾಲರ್ ಎದುರು ಬಲಗೊಂಡ ರೂಪಾಯಿ ಮೌಲ್ಯ

You may also like