Nelyadi: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು, ಆಟೋ ರಿಕ್ಷಾ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಎ.20 ರಂದು ನಡೆದಿರುವ ಕುರಿತು ವರದಿಯಾಗಿದೆ.
ಶಿರಾಡಿ ಗ್ರಾಮದ ಅಡ್ಡಹೊಳೆ ಸಮೀಪದ ಪೇರಮಹಲು ನಿವಾಸಿ ಪ್ರಭಾಕರ (40) ಮೃತಪಟ್ಟ ವ್ಯಕ್ತಿ.
ನೆಲ್ಯಾಡಿಯಿಂದ ಗುಂಡ್ಯ ಕಡೆಗೆ ಪ್ರಭಾಕರ ಅವರು ತೆರಳುತ್ತಿದ್ದು, ಪೆರಿಯಶಾಂತಿ ಬರುವಷ್ಟರಲ್ಲಿಯೇ ಬೆಂಗಳೂರಿನಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಈ ದುರ್ಘಟನೆಯಲ್ಲಿ ಆಟೋ ಚಾಲಕ ಪ್ರಭಾಕರ ಅವರು ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.
ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
