Home » New Guidelines to stop Vehicles: ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ: ಪೊಲೀಸರು ವಾಹನಗಳ ಕೀಲಿಕೈ ತೆಗೆದುಕೊಳ್ಳಬಾರದು

New Guidelines to stop Vehicles: ವಾಹನ ತಪಾಸಣೆಗೆ ಹೊಸ ಮಾರ್ಗಸೂಚಿ ಬಿಡುಗಡೆ: ಪೊಲೀಸರು ವಾಹನಗಳ ಕೀಲಿಕೈ ತೆಗೆದುಕೊಳ್ಳಬಾರದು

by Mallika
0 comments

New Guidelines to stop Vehicles: ರಾಜ್ಯ ಪೊಲೀಸ್‌ ಇಲಖೆಯು ವಾಹನ ತಪಾಸಣೆ ಮಾಡುವ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳ ಕುರಿತು ಮಾರ್ಗಸೂಚಿಯನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

ಮಾರ್ಗಸೂಚಿಯಲ್ಲಿ ಹಲವು ಅಂಶ ಉಲ್ಲೇಖ

– ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಭೌತಿಕವಾಗಿ ಪ್ರಕರಣ ದಾಖಲಿಸು ವಾಗ ಅಥವಾ ವಾಹನಗಳ ತಪಾಸಣೆ ಮಾಡುವಾಗ ಪೊಲೀಸರು ರಿಫೆಕ್ಟಿವ್ ಜಾಕೆಟ್ ಧರಿಸುವುದು. ವಾಹನ ತಪಾಸಣೆ ಸಂದರ್ಭ ಬಾಡಿವೋರ್ನ್ ಕೆಮರಾ ಧರಿಸಬೇಕು.

ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸೆಂಟರ್ (ಟಿಎಂಸಿ) ಅಥವಾ ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ ಮೆಂಟ್ ಸಿಸ್ಟಂ (ಐಟಿಎಂಎಸ್) ಹೊಂದಿರುವ ಘಟಕಗಳಲ್ಲಿ ಆದಷ್ಟು ಸಂಪರ್ಕ ರಹಿತ ಪ್ರಕರಣಗಳನ್ನು ದಾಖಲಿಸಬೇಕು.

– ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು.
– ಹೆದ್ದಾರಿಗಳು ಹಾಗೂ ಇತರ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು ಹಾಗೂ ಇಂತಹ ವಾಹನಗಳ ವಿರುದ್ಧ ಎಫ್ಟಿವಿಆರ್ ದಾಖಲಿಸಲು ತಂತ್ರಜ್ಞಾನ ಅನುಸರಿಸಬೇಕು.

ವಾಹನಗಳ ವೇಗ ತಗ್ಗಿಸಲು ತಪಾಸಣೆ ಸ್ಥಳದ 100ರಿಂದ 150 ಮೀಟರ್ ಮೊದಲೇ ರಿಫೆಕ್ಟಿವ್ ರಬ್ಬರ್ ಕೋನ್ ಹಾಗೂ ಸುರಕ್ಷಾ ಸಲಕರಣೆ ಅಳವಡಿಸಿರಬೇಕು.

– ರಾತ್ರಿ ಮತ್ತು ತಡರಾತ್ರಿ ಸಂಚಾರ ಸಿಗ್ನಲ್ ದೀಪಗಳಿರುವ ಅಥವಾ ಜಂಕ್ಷನ್‌ಗಳ ಬದಿಯಲ್ಲೇ ವಾಹನ ತಪಾಸಣೆ ಮಾಡಬೇಕು.

ಮಾರ್ಗಸೂಚಿಯಲ್ಲೇನಿದೆ?

ಸಕಾರಣವಿಲ್ಲದೆ ವಾಹನಗಳನ್ನು ತಡೆಯಬಾರದು

ಕಣ್ಣಿಗೆ ಕಾಣುವ ಸಂಚಾರ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಮಾತ್ರ ವಾಹನ ನಿಲ್ಲಿಸಬೇಕು

ಜಿಗ್ ಜಾಗ್ ಮಾದರಿಯಲ್ಲಿ ಬ್ಯಾರಿಕೇಡ್ ಹಾಕಿ ವಾಹನ ತಡೆಯಬಾರದು

ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು

ವಾಹನಗಳ ಕೀಲಿಕೈ ತೆಗೆದು ಕೊಳ್ಳಬಾರದು.

You may also like