Admission Rules: ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ಕೇಂದ್ರ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದ್ದು, ಇದರಿಂದಾಗಿ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಒಂದನೇ ತರಗತಿಗೆ ಶಾಲೆಗೆ ದಾಖಲಾತಿ ಪಡೆಯಲು ಜೂನ್ 1 ಕ್ಕೆ 6 ವರ್ಷ ತುಂಬಿರಬೇಕು ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಹೌದು, ಕೇಂದ್ರ ಶಿಕ್ಷಣ ಇಲಾಖೆಯೂ 2025-26ರಿಂದಲೇ ಈ ಆದೇಶ ಜಾರಿಯಾಗಬೇಕೆಂದು ಎಲ್ಲಾ ರಾಜ್ಯಗಳಿಗೆ ಹೊರಡಿಸಲಾಗಿರುವ ಸುತ್ತೋಲೆಯಲ್ಲಿ ತಿಳಿಸಿದೆ. ರಾಜ್ಯ ಸರ್ಕಾರ ಈಗಾಗಲೇ 5.5 ವರ್ಷ ನಿಗದಿಗೊಳಿಸಲಾಗಿತ್ತು. ಇದರಿಂದ ಪೋಷಕರು ಹಾಗೂ ಶಾಲಾ ಸಿಬ್ಬಂದಿಯಲ್ಲಿ ಗೊಂದಲ ಉಂಟಾಗಿದೆ. ಈ ಕುರಿತಂತೆ ಸ್ಪಷ್ಟನೆ ನೀಡಬೇಕೆಂದು ಪತ್ರ ಬರೆಯಲು ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಈಗ ಪೋಷಕರ ನಿದ್ದೆಗೆಡಿಸಿದೆ. ಯಾಕೆಂದರೆ ಯುಕೆಜಿ ತೇರ್ಗಡೆ ಹೊಂದಲಿರುವ ಲಕ್ಷಾಂತರ ಮಂದಿ ಮಕ್ಕಳು ದಾಖಲಾತಿ ಪಡೆಯಲು ಆಗದ ಪರಿಸ್ಥಿತಿ ನಿರ್ಮಾಣವಾಗುವ ಭೀತಿ ಕಾಡುತ್ತಿದೆ.
ಇನ್ನು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಕರಣ ನ್ಯಾಯಾಲಯ ಹಂತದಲ್ಲಿದೆ. ಪೋಷಕರು ಹಾಗೂ ಮಕ್ಕಳ ಮನವಿ ಬಗ್ಗೆ ನನಗೂ ಸಹಾನುಭೂತಿ ಇದೆ. ಮುಂದಿನ ದಿನಗಳಲ್ಲಿ ಕೋರ್ಟ್ ನಿರ್ದೇಶನದ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
