Home » SSLC ಮರು ಪರೀಕ್ಷೆಗೆ ಶುಲ್ಕವಿಲ್ಲ – ಸಿದ್ದರಾಮಯ್ಯ ಘೋಷಣೆ

SSLC ಮರು ಪರೀಕ್ಷೆಗೆ ಶುಲ್ಕವಿಲ್ಲ – ಸಿದ್ದರಾಮಯ್ಯ ಘೋಷಣೆ

0 comments

SSLC: 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹೊರ ಬಿದ್ದಿದ್ದು ಫಸ್ಟ್ ರ್ಯಾಂಕ್ ಬಂದವರು ಕುಣಿದು ಕುಪ್ಪಳಿಸಿದ್ದಾರೆ. ಕುಟುಂಬಸ್ಥರು ಸ್ನೇಹಿತರಿಗೆ ಸಿಹಿ ತಿನ್ನಿಸಿ ಫುಲ್ ಎಂಜಾಯ್ ಮಾಡಿದ್ದಾರೆ. ಜೊತೆಗೆ ಮಾಧ್ಯಮಗಳೊಂದಿಗೆ ಮಾತನಾಡಿಸುತ್ತಾ ಸಂಭ್ರಮವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬೆನ್ನಲ್ಲೇ ಸಿದ್ದರಾಮಯ್ಯ ಅವರು SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಹೌದು, ಇದೇ ತಿಂಗಳಿನಲ್ಲಿ ನಡೆಯಲಿರುವ ಮರುಪರೀಕ್ಷೆ ಕುರಿತಾಗಿ ಖುದ್ದು ಸಿಎಂ ಸಿದ್ದರಾಮಯ್ಯ ಅವರು ಸಿಹಿಸುದ್ದಿ ನೀಡಿದ್ದು, ಮರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ಇರುವುದಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಅಭಿನಂದನೆಗಳು. ಕಳೆದ ಬಾರಿಗೆ ಹೋಲಿಕೆ ಮಾಡಿದಲ್ಲಿ ಈ ಬಾರಿಯ ಫಲಿತಾಂಶ ಶೇ 8ರಷ್ಟು ಪ್ರಗತಿ ಸಾಧಿಸಿದೆ ಎನ್ನುವುದು ಸಂತಸದ ವಿಚಾರ ಎಂದು ಶ್ಲಾಘಿಸಿದ್ದಾರೆ.

ಪರೀಕ್ಷೆಯಲ್ಲಿ ತೇರ್ಗಡೆಯಾಗದ ಅಥವಾ ಈಗ ಪಡೆದಿರುವ ಅಂಕಗಳಿಗಿಂತ ಉತ್ತಮ ಅಂಕ ಗಳಿಸಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದೆ ಮತ್ತೆ ಪರೀಕ್ಷೆ ಬರೆಯುವ ಅವಕಾಶವನ್ನು ನಮ್ಮ ಸರ್ಕಾರ ಕಲ್ಪಿಸಲಿದೆ. ಈ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ಎಲ್ಲರೂ ಉತ್ತಮ‌ ಅಂಕಗಳ ಜೊತೆ ಶೈಕ್ಷಣಿಕ ಜೀವನದ ಮುಂದಿನ ಗುರಿಯೆಡೆಗೆ ಹೆಜ್ಜೆಯಿರಿಸಿ ಎಂದು ಶುಭ ಹಾರೈಸಿದ್ದಾರೆ.

You may also like