Home » BREAKING NEWS | ಈ ನಗರಗಳಲ್ಲಿ ಮದ್ಯ ಮಾರಾಟ ಕಂಪ್ಲೀಟ್ ಬಂದ್ ಮಾಡಿ ಆದೇಶ ಹೊರಡಿಸಿದ ಸರ್ಕಾರ

BREAKING NEWS | ಈ ನಗರಗಳಲ್ಲಿ ಮದ್ಯ ಮಾರಾಟ ಕಂಪ್ಲೀಟ್ ಬಂದ್ ಮಾಡಿ ಆದೇಶ ಹೊರಡಿಸಿದ ಸರ್ಕಾರ

0 comments

ಸ್ವಾತಂತ್ರೋತ್ಸವದ ದಿನದಂದು ಶಿವಮೊಗ್ಗದಲ್ಲಿ
ಸಂಜೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ ಆರು ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಶಿವಮೊಗ್ಗ ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಯಲ್ಲಿ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಇಂದು ರಾತ್ರಿ 12 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಭದ್ರಾವತಿ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಆಗಸ್ಟ್ 16 ರಂದು ಬೆಳಗ್ಗೆ ಆರು ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯ ವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿದ್ದಾರೆ.

ಶಿವಮೊಗ್ಗದ ಎಎ ಸರ್ಕಲ್ ನಲ್ಲಿ ಸಾವರ್ಕರ್ ಫೋಟೊ ವಿಚಾರವಾಗಿ ಗಲಾಟೆ ನಡೆದ ಪರಿಣಾಮ, ಗಾಂಧಿ ಬಜಾ‌ರ್ ನಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿತ ಮಾಡಲಾಗಿತ್ತು. ಹಾಗಾಗಿ ಶಿವಮೊಗ್ಗ ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ‌. ರಾತ್ರಿ 9 ರಿಂದ ಬೆಳಗಿನ ಜಾವ 5 ರವರೆಗೆ ತುರ್ತು ಸಂದರ್ಭವನ್ನು ಹೊರತು ಪಡಿಸಿ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

You may also like

Leave a Comment