5
Airport: ಉತ್ತರ ಪ್ರದೇಶದ ಗೌತಮ ಬುದ್ಧ ನಗರದ ಜೆವಾರ್ ನಲ್ಲಿ ಅಕ್ಟೋಬರ್ 30 ರಂದು ನೋಯ್ಡಾ ಅಂತರರಾಷ್ಟ್ರೀಯ(international) ವಿಮಾನ ನಿಲ್ದಾಣ (Airport) ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆಗೊಂಡ 45 ದಿನಗಳ ಬಳಿಕ ವಿಮಾನಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.
ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಬಳಿಕ ರಾಷ್ಟ್ರ ರಾಜಧಾನಿ ವಲಯದಲ್ಲಿ ನಿರ್ಮಾಣವಾದ ಎರಡನೇ ವಿಮಾನ ನಿಲ್ದಾಣ ಇದಾಗಿದೆ.
