Home » Ration Card ಹೊಂದಿರುವವರೇ ಗಮನಿಸಿ, ಆಗಸ್ಟ್ 31 ರ ಒಳಗೆ ಈ ಕೆಲಸ ಮಾಡದಿದ್ದರೆ ಆಟೋಮ್ಯಾಟಿಕ್ ಆಗಿ ಬಂದ್ ಆಗುತ್ತೆ BPL ಕಾರ್ಡ್ – ಆಹಾರ ಇಲಾಖೆ ಖಡಕ್ ಸೂಚನೆ

Ration Card ಹೊಂದಿರುವವರೇ ಗಮನಿಸಿ, ಆಗಸ್ಟ್ 31 ರ ಒಳಗೆ ಈ ಕೆಲಸ ಮಾಡದಿದ್ದರೆ ಆಟೋಮ್ಯಾಟಿಕ್ ಆಗಿ ಬಂದ್ ಆಗುತ್ತೆ BPL ಕಾರ್ಡ್ – ಆಹಾರ ಇಲಾಖೆ ಖಡಕ್ ಸೂಚನೆ

5 comments
Ration Card

Ration Card: ಪಡಿತರ ಕಾರ್ಡ್‌ ಹೊಂದಿರುವವರು ಈ ತಿಂಗಳ (ಆಗಸ್ಟ್ 31) ಅಂತ್ಯದೊಳಗೆ ಕೆವೈಸಿ ಪ್ರಕ್ರಿಯೆಯನ್ನು ಮಾಡಿಸದಿದ್ದರೆ, ತನ್ನಿಂದ ತಾನೇ ರೇಷನ್ ಕಾರ್ಡ್ ಗಳು ರದ್ಧಾಗುತ್ತವೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸೂಚನೆ ನೀಡಿದೆ.

ಹೌದು, ಪಡಿತರ ಚೀಟಿದಾರರು(Ration Card) ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಪಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆ.7.00 ರಿಂದ ರಾ. 9.00 ರವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ಆಗಸ್ಟ್ 31 ರೊಳಗೆ ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ಇಲಾಖೆ ಸೂಚಿಸಿದೆ.

ಈಗಾಗಲೇ ಇಕೆವೈಸಿ(E KYC) ಕಾರ್ಯ ಕರ್ನಾಟಕದ ಬಹುತೇಕ ಭಾಗಗಳಲ್ಲಿ ನಡೆದಿದೆ. ಕೆಲವು ಜಿಲ್ಲೆಗಳಲ್ಲಿ ಹೆಚ್ಚಿನ ಗ್ರಾಹಕರು ಕೆವೈಸಿ ಮಾಡಿಸಿದ್ದರೆ, ಇನ್ನೂ ಕೆಲವರು ಮಾಡಿಸಿಕೊಂಡಿಲ್ಲ. ಈ ಕಾರಣದಿಂದಲೇ ಸೂಚನೆಯನ್ನು ನೀಡಲಾಗಿದೆ. ಇಕೆವೈಸಿ ಆಗದೇ ಇರುವವರ ಪಟ್ಟಿಯನ್ನು ಆಯಾಯ ನ್ಯಾಯಬೆಲೆ ಅಂಗಡಿಗಳಲ್ಲಿ ಈಗಾಗಲೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಕೂಡಲೇ ಮಾಹಿತಿಯನ್ನು ಆಯಾ ನ್ಯಾಯ ಬೆಲೆ ಅಂಗಡಿಯಲ್ಲಿಯೇ ಮಾಡಿಸಿಕೊಳ್ಳಬೇಕು. ಈಗಾಗಲೇ ನಿಗದಿಪಡಿಸಿದ ಆಗಸ್ಟ್ 31 ರ ಕೊನೆಯ ದಿನಾಂಕದೊಳಗೆ ಇಕೆವೈಸಿ ಮಾಡಿಸದಿದ್ದಲ್ಲಿ ಮಾಡಿಸದ ಸದಸ್ಯರನ್ನು ಅನರ್ಹರೆಂದು ಪರಿಗಣಿಸಿ ಅಂತಹವರ ಹೆಸರನ್ನು ಬಿಪಿಎಲ್ ಪಡಿತರ ಚೀಟಿಯಿಂದ ತೆಗೆದು ಹಾಕಲಾಗುವುದು ಎಂದು ಇಲಾಖೆ ತಿಳಿಸಿದೆ.

ಅಂದಹಾಗೆ ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಇಲಾಖೆ ತಿಳಿಸಿದೆ. ಒಂದೇ ಕುಟುಂಬದಲ್ಲಿಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು ಹಾಗೂ ಅನರ್ಹ ಪಡಿತರ ಚೀಟಿ ಪಡೆದಿರುವುದು ಕಾನೂನಿಗೆ ವಿರುದ್ಧವಾಗಿರುತ್ತದೆ. ಆದ್ದರಿಂದ ಒಂದೇ ಕುಟುಂಬದಲ್ಲಿಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಪಡೆದುಕೊಂಡಿರುವುವವರು ಮತ್ತು ಆರ್ಥಿಕವಾಗಿ ಸಬಲರಾಗಿದ್ದು ಸುಳ್ಳು ಮಾಹಿತಿ ನೀಡಿ ಬಿಪಿಎಲ್‌ ಪಡಿತರ ಚೀಟಿ ಪಡೆದುಕೊಂಡಿರುವವರು ಕೂಡಲೇ ತಾಲೂಕು ಕಚೇರಿ/ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಮ್ಮ ಪಡಿತರ ಚೀಟಿಯನ್ನು ಹಿಂದಿರುಗಿಸಲು ತಿಳಿಸಿದೆ.

You may also like

Leave a Comment