11
Old Pension : ರಾಜ್ಯ ಸರ್ಕಾರಿ ನೌಕರರಿಗೆ ನೌಕರರ ಸಂಘದ ಅಧ್ಯಕ್ಷರಾಗಿರುವ ಸಿ ಸಿ ಎಸ್ ಷಡಕ್ಷರಿ ಅವರು ಗುಡ್ ನ್ಯೂಸ್ ನೀಡಿದ್ದು ನೌಕರರಿಗೆ ಹೊಸ ಭರವಸೆ ಮೂಡುವಂತೆ ಮಾಡಿದ್ದಾರೆ.
ಹೌದು, ರಾಜ್ಯ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರುವಲ್ಲಿ ಸರ್ಕಾರಕ್ಕೆ ಒತ್ತಡ ಹಾಕುತ್ತಲಿದ್ದು, ಹಳೆ ಪಿಂಚಣಿ ಯೋಜನೆ ಜಾರಿ ಮಾಡಿಸಿಕೊಡುವುದೇ ನನ್ನ ಕರ್ತವ್ಯ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದ್ದಾರೆ.
ಅಲ್ಲದೆ ಸರ್ಕಾರಿ ನೌಕರರಿಗೆ ಮಾರಕವಾಗಿರುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಯನ್ನು ಮರು ಜಾರಿಗೊಳಿಸಲು ಈಗಾಗಲೇ ಸರ್ಕಾರದ ಮೇಲೆ ಒತ್ತಡವನ್ನು ಹಾಕಲಾಗಿದೆ. ಹೀಗಾಗಿ ತ್ವರಿತವಾಗಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಬದ್ಧವಾಗಿದ್ದೇವೆ ಎಂದು ಅವರು ತಿಳಿಸಿದರು.
