Southadka Temple: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ (Southadka Temple) ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕ ಸಂದರ್ಭದಲ್ಲಿ ಬ್ಯಾಂಕ್ ಸಿಬ್ಬಂದಿಗಳೇ ಲೋಪ ಎಸಗಿರುವ ಆರೋಪ ಕೇಳಿ ಬಂದಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತದ, ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಿನವೊಂದರಲ್ಲಿ, ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದು ಲಕ್ಷಾಂತರ ರೂ.ಕಾಣಿಕೆ ಸಂದಾಯವಾಗುತ್ತಿದೆ. ಕಾಣಿಕೆ ರೂಪದಲ್ಲಿ ಭಕ್ತರಿಂದ ಸಂದಾಯವಾಗುವ ಹಣಗಳ ಎಣಿಕೆ ಪ್ರತಿ ತಿಂಗಳೂ ನಡೆಯುತ್ತದೆ. ಎಣಿಕೆ ಮಾಡಿದ ಹಣವನ್ನು ರಾಷ್ಟ್ರೀಕೃತ ಬ್ಯಾಂಕ್ ವೊಂದರ ಕೊಕ್ಕಡ ಶಾಖೆಯಲ್ಲಿ ಜಮೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಬ್ಯಾಂಕ್ ಸಿಬ್ಬಂದಿಗಳ ಹಣ ಎಣಿಕೆ ಯಂತ್ರದೊಂದಿಗೆ ದೇವಸ್ಥಾನಕ್ಕೆ ಬಂದು ಹಣ ಸಂಗ್ರಹಿಸಿಕೊಂಡು ಹೋಗುತ್ತಾರೆ. ದೇವಸ್ತಾನದ ಸಿಬ್ಬಂದಿಗಳ ಜೊತೆ ಗ್ರಾಮದ ಇತರೇ ಭಕ್ತರೂ ಸ್ವಯಂ ಸೇವಕರಾಗಿ ಸೇರಿಕೊಂಡು ಹಣ ಎಣಿಕೆ ಮಾಡಲಾಗುತ್ತದೆ.
ಜೂ.20 ಶುಕ್ರವಾರ ಹಣ ಎಣಿಕೆ ಸಂದರ್ಭದಲ್ಲಿ, ಬ್ಯಾಂಕ್ ಸಿಬ್ಬಂದಿಗಳು ಯಂತ್ರದ ಮೂಲಕ ತಲಾ 100 ನೋಟ್‌ಗಳಂತೆ ಬಂಡಲ್ ಮಾಡಿ ಜೋಡಿಸಿಟ್ಟಿದ್ದ ಬಂಡಲ್ ವೊಂದನ್ನು ದೇವನಾನದ ವ್ಯವಸಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಶಬರಾಯ ಅವರು ಕೈಯಲ್ಲಿ ಮರು ಎಣಿಕೆ ಮಾಡಿದ ವೇಳೆ ಅದರಲ್ಲಿ ಏಳೆಂಟು ನೋಟ್‌ಗಳು ಹೆಚ್ಚುವರಿ ಇರುವುದು ಪತ್ತೆಯಾಗಿದೆ. ಈ ಬಗ್ಗೆ ಬ್ಯಾಂಕ್ ಸಿಬ್ಬಂದಿಗಳನ್ನು ಪ್ರಶ್ನಿಸಿದಾಗ ನೋಟ್‌ಗಳು ಒದ್ದೆಯಾಗಿರುವುದರಿಂದ ಬಂಡಲ್‌ನಲ್ಲಿ ಹೆಚ್ಚು ಹೋಗಿರಬಹುದು ಎಂದು ಉತ್ತರಿಸಿದ್ದಾರೆ. ಆದರೆ ಇದರಿಂದ ಸಮಾಧಾನಗೊಳ್ಳದ ಅಧ್ಯಕ್ಷರು, ದೇವಸ್ಥಾನದ ಸಿಬ್ಬಂದಿಗಳ ಮೂಲಕ ಕೆಲವೊಂದು ಹಣದ ಬಂಡಲ್‌ಗಳನ್ನು ಮತ್ತೆ ಎಣಿಕೆ ಮಾಡಿಸಿದ್ದಾರೆ. ಈ ವೇಳೆಯೂ ಬಹುತೇಕ ಬಂಡಲ್‌ಗಳಲ್ಲಿ ನಾಲ್ಕರಿಂದ ಎಂಟು ನೋಟ್‌ಗಳ ತನಕ ಹೆಚ್ಚುವರಿಯಾಗಿ ಇರುವುದು ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ನೋಟುಗಳ ಎಲ್ಲ ಬಂಡಲ್‌ಗಳನ್ನು ದೇವಸ್ಥಾನದ ಸಿಬ್ಬಂದಿಗಳೇ ಎಣಿಕೆ ಮಾಡಿ ಬ್ಯಾಂಕ್ ಗೆ ಜಮೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
