3
Mangaluru: ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬುವವರನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಮೃತ ವ್ಯಕ್ತಿಯು ಬಂಟ್ವಾಳ ತಾಲ್ಲೂಕಿನ ಪುಂಜಾಲಕಟ್ಟೆ ವ್ಯಾಪ್ತಿಯವರು. ಜಿಲ್ಲೆಯಲ್ಲಿ ಪರಿಸ್ಥಿತಿಯು ಬೂದಿ ಮುಚ್ಚಿದ ಕೆಂಡದಂತಿರುವ ಕಾರಣ, ಕಿಡಿಗೇಡಿಗಳು ಅಮಲು ಪದಾರ್ಥ ಸೇವಿಸಿ ಅಹಿತಕರ ಘಟನೆಗಳಿಗೆ ಕಾರಣರಾಗಿ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇರುತ್ತದೆ.
ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲ್ಲೂಕುಗಳಲ್ಲಿ ಶುಕ್ರವಾರದಿಂದ ಶನಿವಾರ ಬೆಳಿಗ್ಗೆ 6 ಗಂಟೆಯವರೆಗೆ ಶೇಂದಿ ಅಂಗಡಿ ಮತ್ತು ಎಲ್ಲ ಮದ್ಯದಂಗಡಿಗಳನ್ನು ಮುಚ್ಚಲು, ಎಲ್ಲ ವಿಧದ ಅಮಲು ಪದಾರ್ಥಗಳ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
