BCCI: ಪುಲ್ವಾಮಾ ಅಟ್ಯಾಕ್ ಮಾತು ಮುನ್ನವೇ ಕಾಶ್ಮೀರದಲ್ಲಿ ಪಹಲ್ಗಾಮ್ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮನಬಂದಂತೆ ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರವಾಸಕ್ಕೆಂದು ಆಗಮಿಸಿದ್ದ ಜನರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ದಾಳಿಗೆ ರಾಜ್ಯದ ಮೂವರು ಸೇರಿ ಒಟ್ಟು 28 ಮಂದಿ ಬಲಿಯಾಗಿದ್ದಾರೆ. ದೇಶಾದ್ಯಂತ ಗಣ್ಯಮಾನ್ಯರು ಘನ ಘೋರ ಘಟನೆಗೆ ಸಂತಾಪವನ್ನು ಸೂಚಿಸುತ್ತಿದ್ದಾರೆ. ಇದರ ಪೆನ್ನಲ್ಲೇ BCCI ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ಐಪಿಎಲ್ ಪಂದ್ಯ ನಡೆಯಲಿದೆ. ಈ ಪಂದ್ಯದ ಸಮಯದಲ್ಲಿ ಆಟಗಾರರು ಮತ್ತು ಅಧಿಕಾರಿಗಳು ಕಪ್ಪು ಪಟ್ಟಿಗಳನ್ನು ಧರಿಸಲಿದ್ದಾರೆ. ಇಂದಿನ ಪಂದ್ಯದ ಸಮಯದಲ್ಲಿ ಯಾವುದೇ ಚಿಯರ್‌ಲೀಡರ್‌ಗಳು ಪ್ರದರ್ಶನ ನೀಡಬಾರದು ಮತ್ತು ಯಾವುದೇ ಪಟಾಕಿ ಸಿಡಿಸಬಾರದು ಎಂದು ಬಿಸಿಸಿಐ ನಿರ್ಧರಿಸಿದೆ. ಬರ್ಬರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಜನರಿಗೆ ಗೌರವ ಸಲ್ಲಿಸುವ ಸಲುವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು BCCI ತಿಳಿಸಿದೆ.
