School: ಮಕ್ಕಳಲ್ಲಿ ಪೌಷ್ಟಕಾಂಶದ ಕೊರತೆಯಾಗಬಾರದು ಎಂಬ ಕಾಳಜಿಯಿಂದ ಸರ್ಕಾರಿ ಶಾಲೆಗಳಲ್ಲಿ (School) ಮೊಟ್ಟೆ ವಿತರಣೆ ಮಾಡುತ್ತಿದೆ. ಆದರೆ ಕೆಲವೆಡೆ ಮೊಟ್ಟೆಗೆ ಭಾರಿ ವಿರೋಧವೂ ವ್ಯಕ್ತವಾಗುತ್ತದೆ. ಅಷ್ಟೇ ಅಲ್ಲ ಮೊಟ್ಟೆ ಕೊಡುತ್ತಿರುವುದನ್ನು ವಿರೋಧಿಸಿ, ಧಾರ್ಮಿಕ ಭಾವನೆಗೆ ಬೆಲೆ ಸಿಗದ ಜಾಗದಲ್ಲಿ ಕಲಿಯುವುದು ಬೇಡ ಎಂದು 70 ವಿದ್ಯಾರ್ಥಿಗಳು ಸರ್ಕಾರಿ ಶಾಲೆ ತೊರೆದ ಘಟನೆ ಮಂಡ್ಯ ತಾಲೂಕಿನ ಆಲಕೆರೆ ಗ್ರಾಮದಲ್ಲಿ ನಡೆದಿದೆ.
ಈ ಮೊದಲು ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡುವ ವಿಚಾರದಲ್ಲಿ ಪರ ವಿರೋಧ ಚರ್ಚೆ ಸೃಷ್ಟಿಯಾಗಿತ್ತು. ಮಕ್ಕಳಿಗೆ ಮೊಟ್ಟೆ ಕೊಟ್ಟರೆ ಶಾಲೆ ಬಿಡಿಸುವುದಾಗಿ ಕೆಲವು ಪೋಷಕರು ಈ ಹಿಂದೆಯೇ ತಿಳಿಸಿದ್ದರು. ಕೆಲವೇ ಸಂಖ್ಯೆಯ ಪೋಷಕರು ಮೊಟ್ಟೆ ನೀಡುವಂತೆ ಆಗ್ರಹಿಸಿದ್ದರು. ಹೀಗಾಗಿ ಇಕ್ಕಟ್ಟಿಗೆ ಸಿಲುಕಿದ್ದ ಅಧಿಕಾರಿಗಳು ನಿಯಮದಂತೆ ಮೊಟ್ಟೆ ವಿತರಣೆ ಆರಂಭಿಸಿದ್ದರು. ಇದರ ಬೆನ್ನಲ್ಲೇ ಮಕ್ಕಳು ಸಾಮೂಹಿಕವಾಗಿ ಶಾಲೆ ತೊರದಿದ್ದಾರೆ. ಶಾಲೆಯಲ್ಲಿ ಒಟ್ಟಾರೆಯಾಗಿ 124 ಮಕ್ಕಳು ಕಲಿಯುತ್ತಿದ್ದು ಆ ಪೈಕಿ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಶಾಲೆ ತೊರೆದಿದ್ದಾರೆ.
Darshan Case: ರೇಣುಕಾಸ್ವಾಮಿ ಕೊಲೆ ಪ್ರಕರಣ – ಇಂದು ದರ್ಶನ್ ಮತ್ತು ತಂಡ ಕೋರ್ಟ್‌ಗೆ ಹಾಜರು
