Home » Kapu: ಕಾಪು: ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು!

Kapu: ಕಾಪು: ಲಾರಿ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು!

0 comments

Kapu: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ರಾಹೆ 66ರಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೂಳೂರು ಫಿಶರೀಸ್ ರಸ್ತೆ ಬಳಿಯ ನಿವಾಸಿ ಧನಂಜಯ ಎ. ಸುವರ್ಣ (43) ಎಂದು ಗುರುತಿಸಲಾಗಿದೆ. ಮೂಳೂರು ಬಾರ್‌ನ ಮುಂಭಾಗದಲ್ಲಿ ರಸ್ತೆ ದಾಟಲೆಂದು ಡಿವೈಡರ್ ಮೇಲೆ ನಿಂತಿದ್ದ ಧನಂಜಯ ಅವರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಲಾರಿಯ ಹೊಡೆತದ ರಭಸಕ್ಕೆ ರಸ್ತೆಗೆ ಬಿದ್ದ ಅವರ ಮೇಲೆ ಲಾರಿಯ ಚಕ್ರ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅಪಘಾತದ ಬಳಿಕ ಚಾಲಕ ಲಾರಿಯನ್ನು ನಿಲ್ಲಿಸದೇ ಪರಾರಿಯಾಗಿದ್ದು, ಲಾರಿಯ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

You may also like