6
Puttur: ಸೋಮವಾರ ಪುತ್ತೂರಿನ(puttur) ಕೊಂಬೆಟ್ಟು ಕಾಲೇಜು ಬಳಿಯ ಮೈದಾನದಲ್ಲಿ ನಡೆದ ಅಶೋಕ ಜನಮನ ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮದಲ್ಲಿ ಜನಸ್ತೋಮದ ನಡುವೆ ಸಿಲುಕಿ ಕೆಲವರು ಅಸ್ವಸ್ಥಗೊಂಡ ಘಟನೆಗೆ ಸಂಬಂಧಿಸಿ ಶಾಸಕ ಅಶೋಕ್ ರೈ ಕ್ಷಮೆ ಕೋರಿದ್ದಾರೆ.
“ನಿರೀಕ್ಷಿಸಿದಕ್ಕಿಂತ ಹೆಚ್ಚು ಜನರು ಕಾರ್ಯಕ್ರಮಕ್ಕೆ ಬಂದಿದ್ದರು. ಮಧ್ಯಾಹ್ನ ಮಳೆಯೂ ಬಂತು. ಹೀಗಾಗಿ ಜನಸ್ತೋಮದಲ್ಲಿ ಸಿಲುಕಿ ಕೆಲವು ಮಂದಿ ಅಸ್ವಸ್ಥರಾದರು. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
