Home » Bengaluru: ಜನೌಷಧಿ‌ ಕೇಂದ್ರ ಮಾದರಿಯಲ್ಲಿ ಕೀಟನಾಶಕ ಕೇಂದ್ರ: ಸಚಿವ ವಿ.ಸೋಮಣ್ಣ

Bengaluru: ಜನೌಷಧಿ‌ ಕೇಂದ್ರ ಮಾದರಿಯಲ್ಲಿ ಕೀಟನಾಶಕ ಕೇಂದ್ರ: ಸಚಿವ ವಿ.ಸೋಮಣ್ಣ

0 comments
V Somanna

Bengaluru: ಕೇಂದ್ರ ಸರ್ಕಾರ ಜನೌಷಧಿ ಕೇಂದ್ರಗಳ ಮೂಲಕ ಯಾವ ರೀತಿ ರಿಯಾಯತಿ ದರದಲ್ಲಿ ಔಷಧ ನೀಡುತ್ತಿದೆಯೋ ಅದೇ ರೀತಿ ರೈತರಿಗೆ ಅನುಕೂಲವಾಗುವ ಹಿನ್ನಲೆ ಪ್ರತಿ ಜಿಲ್ಲೆಯಲ್ಲೂ ಕೀಟನಾಶಕ ಕೇಂದ್ರ (ಫೆಸ್ಟಿಸೈಡ್‌ ಸೆಂಟರ್‌) ಸ್ಥಾಪಿಸುವ ಚಿಂತನೆ ಇದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದರು.

ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿ, ಜನೌಷಧಿ ಕೇಂದ್ರಗಳ ಮೂಲಕ ಕೇಂದ್ರ ಸರ್ಕಾರ ಕಡಿಮೆ ದರದಲ್ಲಿ ಔಷಧಿಗಳನ್ನು ನೀಡುತ್ತಿದೆ. ಅದೇ ರೀತಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕೀಟನಾಶಕ ಕೇಂದ್ರಗಳನ್ನು ಸ್ಥಾಪಿಸಿ ರೈತರಿಗೆ ಕಡಿಮೆ ದರದಲ್ಲಿ ಉತ್ಪನ್ನಗಳನ್ನು ಒದಗಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ವಿವರಿಸಿದರು.

You may also like