7
Bangalore: ಖ್ಯಾತ ಟಿವಿ ಶೋ ಕಾಮಿಡಿ ಕಿಲಾಡಿಗಳ ಮೂಲಕ ಹೆಸರು ಮಾಡಿದ್ದ ಹಾಸ್ಯನಟ ಅಪ್ಪಣ್ಣ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿರುವ ಕುರಿತು ವರದಿಯಾಗಿದೆ.
ಅಪ್ಪಣ್ಣ ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಂತ್ರಸ್ತೆ ತನ್ನ ದೂರಿನಲ್ಲಿ ಅಪ್ಪಣ್ಣ ತನ್ನ ಮೇಲೆ ಕೆಟ್ಟ ದೃಷ್ಟಿ ಬೀರುತ್ತಿದ್ದ. ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಎಂದು ಆರೋಪ ಮಾಡಿದ್ದಾರೆ. ಒಂದು ವೇಳೆ ನಾನು ಆತ್ಮಹತ್ಯೆಗೆ ಶರಣಾದರೆ ಅದಕ್ಕೆ ಅಪ್ಪಣ್ಣನೇ ಕಾರಣ ಎಂದು ನಟಿ ಸಂತ್ರಸ್ತೆ ಹೇಳಿಕೊಂಡಿದ್ದಾರೆ.
ದೂರು ದಾಖಲಿಸಿಕೊಂಡಿರುವ ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ವಿಚಾರಣೆ ಪ್ರಾರಂಭ ಮಾಡಿದ್ದಾರೆ.
