5
Sullia: ಪಿಕಪ್ ವಾಹನವೊಂದು ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ ಘಟನೆ ಸುಳ್ಯ (Sullia) ತಾಲೂಕಿನ ಬೆಳ್ಳಾರೆ ಸಮೀಪದ ನೆಟ್ಟಾರು ಎಂಬಲ್ಲಿ ಸಂಭವಿಸಿದೆ.
ಬೆಳ್ಳಾರೆ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಪಿಕಪ್ ವಾಹನ ನೆಟ್ಟಾರು ತಿರುವು ಬಳಿ ಸಮೀಪಿಸುತ್ತಿದ್ದಂತೆ ಮುಂಭಾಗದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಅಗ್ನಿಯ ತೀವ್ರತೆಗೆ ಪಿಕಪ್ ವಾಹನ ಸಂಪೂರ್ಣ ಸುಟ್ಟು ಹೋಗಿದೆ.
