Home » Plastic Bottle : ಇನ್ಮುಂದೆ ಮದುವೆ ಮನೆಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬ್ಯಾನ್

Plastic Bottle : ಇನ್ಮುಂದೆ ಮದುವೆ ಮನೆಗಳಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲ್ ಬ್ಯಾನ್

0 comments

Plastic Bottle: ಸರ್ಕಾರ ಪ್ಲಾಸ್ಟಿಕ್ ನಿಷೇಧದ ಕುರಿತಾಗಿ ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಕೆಲವು ತಿನಿಸು ತಯಾರಿಕೆಗಳಲ್ಲಿ ಬಳಸಲಾಗುತ್ತಿದ್ದ ಪ್ಲಾಸ್ಟಿಕ್ ಅನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಇನ್ನು ಮುಂದೆ ಮದುವೆ ಮನೆಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಬಳಸುವಂತಿಲ್ಲ ಎಂದು ಕೇರಳ ಹೈಕೋರ್ಟ್ ಸರ್ಕಾರಕ್ಕೆ ಆದೇಶ ನೀಡಿದೆ.

ಹೌದು, ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿರುವ ಕೇರಳ ಹೈಕೋರ್ಟ್​ ರಾಜ್ಯದಲ್ಲಿ ಮದುವೆ ಸಮಾರಂಭದಲ್ಲಿ ನೀರಿನ ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿದೆ ಮತ್ತು ಯಾವುದೇ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು ಎಂದು ಹೇಳಿದೆ.

ಅಲ್ಲದೆ ಮರುಬಳಕೆ ಮಾಡಲಾಗದ ಪ್ಲಾಸ್ಟಿಕ್ ಅನ್ನು ತೊಡೆದುಹಾಕಲು ಕಠಿಣ ಕ್ರಮಗಳು ಅಗತ್ಯವೆಂದು ನ್ಯಾಯಾಲಯ ಹೇಳಿದೆ. 100 ಕ್ಕೂ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಳಸಲು ಪರವಾನಗಿ ಅಗತ್ಯ ಎಂದು ಅದು ಹೇಳಿದೆ.

You may also like