Home » Mangalore: ಪ್ಲಾಸ್ಟಿಕ್ ರಸ್ತೆ, ಬಯೋ ಗ್ಯಾಸ್ ಯೋಜನೆ: ಮಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರಧಾನಿ ಮೋದಿ ಶ್ಲಾಘನೆ!

Mangalore: ಪ್ಲಾಸ್ಟಿಕ್ ರಸ್ತೆ, ಬಯೋ ಗ್ಯಾಸ್ ಯೋಜನೆ: ಮಂಗಳೂರಿನ ತ್ಯಾಜ್ಯ ನಿರ್ವಹಣೆಗೆ ಪ್ರಧಾನಿ ಮೋದಿ ಶ್ಲಾಘನೆ!

0 comments

Mangalore: ಪ್ರಧಾನಿ ಮೋದಿ ಭಾನುವಾರ ತಮ್ಮ ‘ಮನ್‌ಕೀ ಬಾತ್‌’ ಭಾಷಣದಲ್ಲಿ ಮಂಗಳೂರಿನಲ್ಲಿ ನಡೆಯುತ್ತಿರುವ ಅತ್ಯಾಧುನಿಕ ತ್ಯಾಜ್ಯ ನಿರ್ವಹಣೆ ಬಗ್ಗೆ ಪ್ರಸ್ತಾಪಿಸಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಪ್ರಸ್ತುತ ದ.ಕ. ಜಿಲ್ಲಾ ಪಂಚಾಯ್ತಿ, ಮಂಗಳಾ ರಿಸೋರ್ಸ್‌ ಮ್ಯಾನೇಜ್‌ಮೆಂಟ್‌ ಪ್ರೈವೇಟ್ ಲಿಮಿಟೆಡ್‌ (ಎಂಆರ್‌ಎಂಪಿಎಲ್‌), ವೈಷ್ಣವಿ ಕಂಪನಿ ಹಾಗೂ ಬಂಟ್ವಾಳ ಶಾಸಕ ರಾಜೇಶ್‌ ನಾಯ್ಕ್‌ ನೇತೃತ್ವದ ಒಡ್ಡೂರು ಫಾರ್ಮ್ಸ್‌ ಸಂಸ್ಥೆಗಳಲ್ಲಿ ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ತ್ಯಾಜ್ಯ ನಿರ್ವಹಣೆ ನಡೆಯುತ್ತಿದೆ. ಇವುಗಳನ್ನೆಲ್ಲ ಒಟ್ಟಾಗಿ ಸೇರಿಸಿ ಪ್ರಧಾನಿ ಮನ್‌ಕೀ ಬಾತ್‌ನಲ್ಲಿ ಮಂಗಳೂರು ತ್ಯಾಜ್ಯ ನಿರ್ವಹಣೆ ಬಗ್ಗೆ ಉಲ್ಲೇಖಿಸಿದ್ದಾರೆ ಎನ್ನುವುದು ಎಂಆರ್‌ಎಂಪಿಎಲ್‌ ಅಧ್ಯಕ್ಷ ದಿಲ್‌ರಾಜ್‌ ಆಳ್ವ ಅಭಿಪ್ರಾಯ.

ಇದಕ್ಕೆ ಉದಾಹರಣೆ ಆಗಿ ರಾಜ್ಯದಲ್ಲೇ ಮೊದಲ ಬಾರಿಗೆ ಪ್ಲಾಸ್ಟಿಕ್‌ ಉತ್ಪನ್ನವನ್ನು ಬಳಸಿಕೊಂಡು ತಲಪಾಡಿಯಿಂದ ನಂತೂರು ಹಾಗೂ ಮುಕ್ಕದಿಂದ ಸಾಸ್ತಾನ ವರೆಗೆ ಹೆದ್ದಾರಿಯ ಸರ್ವಿಸ್‌ ರಸ್ತೆಗಳಿಗೆ ಡಾಂಬರೀಕರಣ ನಡೆಸಲಾಗಿದೆ. ಈ ಎಲ್ಲ ಸಂಗತಿಗಳನ್ನು ಗಮನದಲ್ಲಿ ಇರಿಸಿಕೊಂಡೇ ಪ್ರಧಾನಿ ಮನ್‌ಕೀ ಬಾತ್‌ನಲ್ಲಿ ಮಂಗಳೂರಿನಲ್ಲಿ ಅತ್ಯಾಧುನಿಕ ತ್ಯಾಜ್ಯ ನಿರ್ವಹಣೆ ನಡೆಯುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Crime: ರಸ್ತೆ ಬದಿ ಸಾಲಾಗಿ ನಿಲ್ಲಿಸಿದ್ದ ಬೈಕ್‌ ಗಳಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು!

You may also like