Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದಾಗಿ ಜೈಲುವಾಸ ಅನುಭವಿಸುತ್ತಿರುವ ನಟ ದರ್ಶನ್ ಸೇರಿ ಇನ್ನಿತರ ಆರೋಪಿಗಳನ್ನು ರಾಜ್ಯದ ಇತರೆ ಕಾರಾಗೃಹಗಳಿಗೆ ವರ್ಗಾವಣೆ ಮಾಡುವಂತೆ ಪ್ರಾಸಿಕ್ಯೂಷನ್ ಸಲ್ಲಿಸಿದ್ದ ಅರ್ಜಿ ಹಾಗೂ ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿ ವಿಚಾರಣೆ ಇಂದು ನಗರದ 64ನೇ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು.
ವಿಚಾರಣೆ ಸಂದರ್ಭದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಪ್ಪನ ಅಗ್ರಹಾರದಿಂದ ಹಾಜರಾದ ದರ್ಶನ್, ನ್ಯಾಯಾಧೀಶರ (Judge) ಮುಂದೆ ” ಬಿಸಿಲು ನೋಡಿ ಬಹಳ ದಿನವಾಗಿದೆ. ಬಟ್ಟೆಗಳು ವಾಸನೆ ಬರುತ್ತಿವೆ. ಫಂಗಸ್‌ನಿಂದಾಗಿ ಇಲ್ಲಿ ಬದುಕಲು ಆಗುತ್ತಿಲ್ಲ. ದಯಮಾಡಿ ನನಗೆ ವಿಷ ನೀಡುವಂತೆ ಆದೇಶಿಸಿ” ಎಂದು ಮನವಿ ಮಾಡಿದರು.
ಈ ಮನವಿಗೆ ಜಡ್ಜ್ ಹಾಗೆಲ್ಲ ಆದೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ವಿಷ ಕೊಡಿ ಎಂದು ದರ್ಶನ್ ಮೂರು ಬಾರಿ ಬೇಡಿಕೊಂಡರೆ ಫಂಗಸ್ ಆಗಿದೆ ಎಂದು ಹಲವು ಬಾರಿ ಹೇಳಿದರು.
ಇದನ್ನೂ ಓದಿ:Yellow Line Metro: ಯೆಲ್ಲೋ ಮೆಟ್ರೋ: ಸೆಪ್ಟೆಂಬರ್ 15ಕ್ಕೆ ಟ್ರ್ಯಾಕಿಗಿಳಿಯಲಿದೆ ನಾಲ್ಕನೇ ರೈಲು
ಪ್ರಾಸಿಕ್ಯೂಷನ್ ಮತ್ತು ಹೆಚ್ಚುವರಿ ಹಾಸಿಗೆ ಹಾಗೂ ದಿಂಬು ನೀಡುವಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್ ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.
